* ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ಸಂಗೀತ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ 2025ನೇ ಸಾಲಿನ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ಗೆ ಹಿಂದೂಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಆಯ್ಕೆಯಾಗಿದ್ದಾರೆ.
* ಈ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯು ₹ 5 ಲಕ್ಷ ನಗದು, ಸರಸ್ವತಿ ವಿಗ್ರಹ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
* ವೈ.ಕೆ. ಮುದ್ದುಕೃಷ್ಣ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಮೈಸೂರು ಅರಮನೆಯ ಮುಖ್ಯ ವೇದಿಕೆಯಲ್ಲಿ ಇದೇ 22ರಂದು ನಡೆಯುವ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
* ‘ಅದ್ಭುತ ಗಾಯನದ ಮೂಲಕ ವೆಂಕಟೇಶ್ ಕುಮಾರ್ ಅವರು ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಅವರ ಸಾಧನೆ ಪರಿಗಣಿಸಿ ಈ ಆಯ್ಕೆ ಮಾಡಲಾಗಿದ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
* ಈ ಕುರಿತು ಮಾತನಾಡಿದ ಎಂ.ವೆಂಕಟೇಶ್ ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ ಎಂದರು.
ಪಂಡಿತ್ ಎಂ.ವೆಂಕಟೇಶ್ ಕುಮಾರ್ಗೆ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’
Published by Jyoti Angadi
22 ಸೆಪ್ಟೆಂಬರ್ 2025