* 2014 ರ ಬ್ಯಾಚ್ನ ಐಎಫ್ಎಸ್ (IFS) ಅಧಿಕಾರಿ ನಿಧಿ ತಿವಾರಿ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.* ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಈ ನೇಮಕಾತಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದನೆ ನೀಡಿದೆ.* ಉತ್ತರಪ್ರದೇಶದ ವಾರಣಾಸಿಯ ಮೆಹಮುರ್ಗಂಜ್ ಮೂಲದ ನಿಧಿ ತಿವಾರಿ, 2013ರ ನಾಗರಿಕ ಸೇವಾ ಪರೀಕ್ಷೆಯಲ್ಲಿ 96ನೇ ಸ್ಥಾನ ಪಡೆದಿದ್ದರು. ವಾರಣಾಸಿ ಕ್ಷೇತ್ರವನ್ನು ಪ್ರಧಾನಿ ಮೋದಿ 2014ರಿಂದ ಪ್ರತಿನಿಧಿಸುತ್ತಿದ್ದಾರೆ.* ನಿಧಿ ತಿವಾರಿ, 2013ರಲ್ಲಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ, ವಾರಣಾಸಿಯಲ್ಲಿ ಸಹಾಯಕ ಆಯುಕ್ತರಾಗಿದ್ದರು. ಅವರು 2022ರಲ್ಲಿ ಪ್ರಧಾನ ಮಂತ್ರಿ ಕಚೇರಿಯಲ್ಲಿ ಅಧೀನ ಕಾರ್ಯದರ್ಶಿಯಾಗಿ ಸೇರ್ಪಡೆಯಾಗಿ, 2023 ರಿಂದ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.* ನಂತರ ವಿದೇಶಾಂಗ ಸಚಿವಾಲಯದಲ್ಲಿ ನಿಶ್ಯಸ್ತ್ರೀಕರಣ ಮತ್ತು ಅಂತರರಾಷ್ಟ್ರೀಯ ಭದ್ರತಾ ವ್ಯವಹಾರಗಳ ವಿಭಾಗದಲ್ಲಿ ಕಾರ್ಯನಿರ್ವಹಿಸಿದರು. ತಿವಾರಿ ಅವರು ಪ್ರಧಾನಿ ಸಚಿವಾಲಯದಲ್ಲಿ ಮೂರು ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರಿಗೆ ವರದಿ ಮಾಡುವ 'ವಿದೇಶಾಂಗ ಮತ್ತು ಭದ್ರತೆ' ವಿಭಾಗದಲ್ಲಿ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.* 2016ರಲ್ಲಿ ಅತ್ಯುತ್ತಮ ತರಬೇತಿ ಅಧಿಕಾರಿ ಮತ್ತು ಪ್ರಬಂಧಕ್ಕೆ ರಾಯಭಾರಿ ಬಿಮಲ್ ಸನ್ಯಾಲ್ ಸ್ಮಾರಕ ಪದಕವನ್ನು ಪಡೆದಿದ್ದಾರೆ.