* ಲೈಂಗಿಕ ಆರೋಪಗಳನ್ನು ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಅವರನ್ನು ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರು ತಮಗೆ ಲಭಿಸಿದ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಅವರ ನಿವಾಸ ಪಥದ ಪಾದಚಾರಿ ಮಾರ್ಗದಲ್ಲಿ ತೊರೆದು ಹೋಗಿದ್ದಾರೆ.
* ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಅವರು ನೇಮಕದ ಬೆನ್ನಲ್ಲೇ ಕುಸ್ತಿಪಟು ಸಾಕ್ಷಿ ಮಲಿಕ್ ಹಾಗೂ ವಿನೀತ್ ಪೋಗಟ್ ಅವರು ಕ್ರೀಡೆಗೆ ನಿವೃತ್ತಿ ಘೋಷಿಸಿದ್ದರು.
* ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಅವರ ಬೆಂಬಲಿಗ ಸಂಜಯ್ ಸಿಂಗ್ ಡಿಸೆಂಬರ್ 21 ರಂದು ನಡೆದ ಚುನಾವಣೆಯಲ್ಲಿ ವಿಜೇತರಾಗಿದ್ದಾರೆ.
* ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಪತ್ರ ಬರೆದಿರುವ ಭಜರಂಗ್ ಪೂನಿಯಾ, ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆ ಆಗಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಪದ್ಮಶ್ರೀ ಪ್ರಶಸ್ತಿಯನ್ನು ಮರಳಿಸುತ್ತಿರುವುದಾಗಿ ತಿಳಿಸಿದ್ದಾರೆ.
ಶನಿವಾರ, 23 ಡಿಸೆಂಬರ್ 2023
10:30 ಪೂರ್ವಾಹ್ನ
Daily PDF
ಪ್ರಧಾನಿ ನಿವಾಸದ ಬಳಿ ಪದ್ಮಶ್ರೀ ಪ್ರಶಸ್ತಿ ತೊರೆದ ಕುಸ್ತಿಪಟು ಬಜರಂಗ್ ಪುನಿಯಾ
Authored by:
Bhagya R K