* ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಗಸ್ಟ್ 1ರಂದು 'ಲೋಕಮಾನ್ಯ ತಿಲಕ' ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ (ಹಿಂದ್ ಸ್ವರಾಜ್ ಸಂಘ) ಜುಲೈ 10 ರಂದು (ಸೋಮವಾರ) ತಿಳಿಸಿದೆ.
* ಲೋಕಮಾನ್ಯ ತಿಲಕ್ ಅವರ 103ನೇ ಪುಣ್ಯತಿಥಿಯಂದು 'ಲೋಕಮಾನ್ಯ ತಿಲಕ್' ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ದೀಪಕ್ ತಿಲಕ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
* ಮೋದಿ ಅವರ ಸರ್ವೋಚ್ಚ ನಾಯಕತ್ವ ಮತ್ತು ಆತ್ಮನಿರ್ಭರ ಭಾರತ ಪರಿಕಲ್ಪನೆಯಲ್ಲಿ ದೇಶವು ಅಭಿವೃದ್ಧಿಯ ಮೆಟ್ಟಿಲುಗಳನ್ನು ಏರುತ್ತಿದೆ ಎಂದಿದ್ದಾರೆ.
* ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಎನ್‌ಸಿಪಿ ಮುಖ್ಯಸ್ಥರಾದ ಶರದ್ ಪವಾರ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಹಾಗೂ ಮಹಾರಾಷ್ಟ್ರದ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ
ಏಕನಾಥ ಶಿಂದೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್ ಮತ್ತು ಅಜಿತ್ ಪವಾರ ಅವರನ್ನೂ ಆಹ್ವಾನಿಸಲಾಗಿದೆ ಎಂದು ವಿವರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 'ಲೋಕಮಾನ್ಯ ತಿಲಕ್' ಪ್ರಶಸ್ತಿಗೆ ಆಯ್ಕೆ
Published by Yallamma G
11 ಜುಲೈ 2023