* ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮಹಾನಿರ್ದೇಶಕರ ಹುದ್ದೆಗೆ ನಿವೃತ್ತ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಕ ಮಾಡಲಾಗಿದೆ.
* ಯುಜಿ–ನೀಟ್ ಮತ್ತು ಯುಜಿಸಿ–ನೆಟ್ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮಹಾನಿರ್ದೇಶಕ ಸುಬೋಧ್ ಸಿಂಗ್ ಅವರನ್ನು ಆ ಹುದ್ದೆಯಿಂದ ಜೂನ್ 22 ರಂದು (ಶನಿವಾರ) ತೆಗೆದು ಹಾಕಲಾಗಿದ್ದು, ಅವರ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಕ ಮಾಡಲಾಗಿದೆ.
* ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಷನ್ (ಐಟಿಪಿಒ) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಪ್ರದೀಪ್ ಸಿಂಗ್ ಖರೋಲಾ ಅವರಿಗೆ ಎನ್‌ಟಿಎ ಮಹಾ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.
* ಪ್ರದೀಪ್ ಸಿಂಗ್ ಖರೋಲಾ ಅವರನ್ನು 2019ರಲ್ಲಿ ನಾಗರಿಕ ವಿಮಾನಯಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ (ITPO) ಅಧ್ಯಕ್ಷರಾಗಿ 2022 ರಿಂದ ಅವರು ಸೇವೆ ಸಲ್ಲಿಸುತ್ತಿದ್ದಾರೆ.
* ಭಾರತೀಯ ಸಮಾಜಗಳ ನೋಂದಣಿ ಕಾಯಿದೆ 1860 ರ ಪ್ರಕಾರ 2017ರ ನವೆಂಬರ್‌ನಲ್ಲಿ ಸ್ಥಾಪಿಸಲಾದ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA), ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಕ್ಕಾಗಿ ವಿವಿಧ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಒಂದು ಸ್ವಾಯತ್ತ ಸಂಸ್ಥೆಯಾಗಿದೆ.
* ಈ ಸಂಸ್ಥೆಯು ಎನ್‌ಟಿಎ, ನೀಟ್, ಜೆಇಇ, ಸಿಟಿಇಟಿ, ಗೇಟ್, ಜಿಪ್ಯಾಟ್, ಜಿಮ್ಯಾಟ್, ಸಿಎಟಿ, ಯುಜಿಸಿ-ನೆಟ್ ಮತ್ತು ಸಿಎಸ್‌ಐಆರ್ ನೆಟ್ ನಂತಹ ಪರೀಕ್ಷೆಗಳನ್ನು ನಡೆಸುತ್ತದೆ.
ಸೋಮವಾರ, 24 ಜೂನ್ 2024
1:55 ಅಪರಾಹ್ನ
Daily PDF
ಪ್ರದೀಪ್ ಸಿಂಗ್ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮಹಾನಿರ್ದೇಶಕರಾಗಿ ನೇಮಕ
Authored by:
Bhagya R K