* ಪುಟ್ಟ ಮಕ್ಕಳ ನೆಚ್ಚಿನ ತಿನಿಸು ಬಾಂಬೆ ಮಿಠಾಯಿ ಎಂತಲೇ ಚಿರಪರಿಚಿತವಾಗಿರುವ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಪುದುಚೇರಿ ಸರಕಾರ ಆದೇಶ ಹೊರಡಿಸಿದೆ.
* ಅದರಲ್ಲಿ ಆರೋಗ್ಯಕ್ಕೆ ಹಾನಿಕರವಾದ ರೊಡಮೈನ್-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ.
* ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ತಿಳಿಸಿದ್ದಾರೆ.
*Rhodamine-B ಇದನ್ನು ಸೇವಿಸಿದರೆ ಜೀವಕೋಶಗಳು ಮತ್ತು ಅಂಗಾಂಶಗಳ ಮೇಲೆ ಆಕ್ಸಿಡೇಟಿವ್ ಒತ್ತಡವನ್ನು ಉಂಟುಮಾಡಬಹುದು. ಇದರ ಸೇವನೆ ಕಾಲಾನಂತರದಲ್ಲಿ ಯಕೃತ್ತು ಹಾನಿ, ಗೆಡ್ಡೆಗಳು ಮತ್ತು ಮಾರಣಾಂತಿಕ ಕಾಯಿಲೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ವರದಿಯಾಗಿದೆ.
ಪುಟ್ಟ ಮಕ್ಕಳ ನೆಚ್ಚಿನ ತಿನಿಸು ಕಾಟನ್ ಕ್ಯಾಂಡಿ ಮಾರಾಟ ನಿಷೇಧ
Published by Akshata Halli
13 ಫೆಬ್ರವರಿ 2024