* ಆಗಸ್ಟ್ 28 ರಿಂದ ಸೆಪ್ಟೆಂಬರ್ 8ರವರೆಗೆ ಪ್ಯಾರಿಸ್‌ನಲ್ಲಿ ನಡೆಯಲಿರುವ ಪ್ಯಾರಾಲಿಂಪಿಕ್ಸ್ ಕೂಟದಲ್ಲಿ ಪಾಲ್ಗೊಳ್ಳುವ ಭಾರತ ಪ್ಯಾರಾಲಿಂಪಿಕ್ಸ್ ತಂಡಕ್ಕೆ ಆಗಸ್ಟ್ 16 ರಂದು ಬೀಳ್ಕೊಡುಗೆ ನೀಡಲಾಯಿತು. ಭಾರತ ಪ್ಯಾರಾಲಿಂಪಿಕ್ಸ್ ಸಮಿತಿ ಮತ್ತು ಭಾರತ ಕ್ರೀಡಾ ಪ್ರಾಧಿಕಾರ ಈ ಕಾರ್ಯಕ್ರಮವನ್ನು ಏರ್ಪಡಿಸಿತ್ತು.
* ಕಳೆದ ಟೋಕಿಯೊ ಪ್ಯಾರಾಲಿಂಪಿಕ್ಸ್ನಲ್ಲಿ 19 ಪದಕ ಗೆದ್ದ ಭಾರತ, ಈ ಬಾರಿ 25 ಪದಕ ಗೆಲ್ಲುವ ಗುರಿಯೊಂದಿಗೆ ಪ್ಯಾರಿಸ್ಗೆ ಪ್ರಯಾಣ ಬೆಳೆಸಿದೆ. ಈ ಬಾರಿ ದಾಖಲೆಯ 84 ಮಂದಿ ಪ್ಯಾರಾ ಕ್ರೀಡಾಪಟುಗಳು ವಿವಿಧ 12 ಕ್ರೀಡೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
* ಆರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕೆನೊಯಿಂಗ್, ಸೈಕ್ಲಿಂಗ್, ಅಂಧರ ಜುಡೊ, ಪವರ್‌ಲಿಫ್ಟಿಂಗ್, ರೋಯಿಂಗ್, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೇಕ್ವಾಂಡೊ ಕ್ರೀಡೆಗಳಲ್ಲಿ ಭಾರತದ ಸ್ಪರ್ಧಿಗಳು ಸ್ಪರ್ಧಿಸಲಿದ್ದಾರೆ.
* ದೇಶದ ಅಥ್ಲೀಟ್‌ಗಳು ಈ ಬಾರಿಯೂ ಉತ್ತಮ ಪ್ರದರ್ಶನ ನೀಡುವ ಮೂಲಕ ದೇಶದ ಕೀರ್ತಿ ಪತಾಕೆಯನ್ನು ಹಾರಿಸುವ ವಿಶ್ವಾಸ ನನಗಿದೆ ಎಂದು ಭಾರತ ಪ್ಯಾರಾಲಿಂಪಿಕ್ ಸಮಿತಿ ಅಧ್ಯಕ್ಷ ದೇವೇಂದ್ರ ಝಜಾರಿಯಾ ವಿಶ್ವಾಸ ವ್ಯಕ್ತಪಡಿಸಿದರು.
* “ನಮ್ಮ ಪ್ಯಾರಾ ಅಥ್ಲೀಟ್‌ಗಳು ಅಡೆತಡೆಗಳನ್ನು ಜಯಿಸಲು ಮತ್ತು ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸುವ ಗಮನಾರ್ಹ ಸಾಮರ್ಥ್ಯವನ್ನು ಹೊಂದಿದ್ದಾರೆ. ಅವರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ಗಾಗಿ ತಮ್ಮ ತಯಾರಿಯಲ್ಲಿ ಗಮನಾರ್ಹ ದೃಢತೆ ಮತ್ತು ಪರಿಶ್ರಮವನ್ನು ತೋರಿಸಿದ್ದಾರೆ” ಎಂದು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
* ಟೋಕಿಯೋ ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ಗೆದ್ದಿದ್ದ ಸುಮಿತ್ ಆಂಟಿಲ್ ಮತ್ತು ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಬೆಳ್ಳಿ ಗೆದಿದ್ದ ಭಾಗ್ಯಶ್ರೀ ಜಾಧವ್ ಅವರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಗಳಾಗಿ ಹೆಸರಿಸಲ್ಪಟ್ಟಿದ್ದಾರೆ.
ಶನಿವಾರ, 17 ಆಗಸ್ಟ್ 2024
12:37 ಅಪರಾಹ್ನ
Daily PDF
ಪ್ಯಾರಾಲಿಂಪಿಕ್ಸ್ ಗೇಮ್ಸ್ 2024: ಭಾರತ ಪ್ಯಾರಾಲಿಂಪಿಕ್ಸ್ ತಂಡಕ್ಕೆ ಬೀಳ್ಕೊಡುಗೆ
Authored by:
Jyoti Angadi