* ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ರವರನ್ನು ಭಾರತದ ''ರಾ' ಗೂಢಚಾರೀ ಸಂಸ್ಥೆ'ಯ (RAW) ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.
* ಎರಡು ವರ್ಷಗಳ ಅವಧಿಗೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ಕಾರ್ಯದರ್ಶಿಯನ್ನಾಗಿ ರವಿ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.
* ದೇಶದ ಬೇಹುಗಾರಿಕಾ ಸಂಸ್ಥೆ ರಾಗೆ ಹೊಸ ಮುಖ್ಯಸ್ಥರು ನೇಮಕವಾಗಿದ್ದಾರೆ. ಛತ್ತೀಸ್‌ಗಢ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರನ್ನು ರಾ (RAW) ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.
* ಹಾಲಿ ರಾ ಮುಖ್ಯಸ್ಥ ಸಮಂತ್ ಗೋಯಲ್ ತಮ್ಮ ಅವಧಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. 1984ರ ಪಂಜಾಬ್ ಕೇಡರ್‌ನ ಸಮಂತ್ ಕುಮಾರ್ ಗೋಯಲ್ ಜೂನ್ 2019ರಲ್ಲಿ ರಾ ಮುಖ್ಯಸ್ಥರಾಗಿ ನೇಮಕವಾಗಿದ್ದರು.
* 1968ರಲ್ಲಿ ರಾ ಏಜೆನ್ಸಿಯನ್ನು ಸ್ಥಾಪಿಸಲಾಗಿದ್ದು, ಭಾರತದ ಪ್ರಧಾನ ವಿದೇಶಿ ಗುಪ್ತಚರ ಸಂಸ್ಥೆಯಾಗಿದೆ. ಚೀನಾ ಮತ್ತು ಪಾಕಿಸ್ತಾನದ ಚಟುವಟಿಕೆ ಮೇಲೆ ಕಣ್ಣಿಡಲು ರಾ ಅನ್ನು ಪ್ರಾರಂಭಿಸಲಾಯಿತು.
ರಾ' ಗೂಢಚಾರಿ ಸಂಸ್ಥೆಯ ಮುಖ್ಯಸ್ಥರಾಗಿ ರವಿ ಸಿನ್ಹಾ ಅವರ ನೇಮಕ
Published by Yallamma G
20 ಜೂನ್ 2023