* ರಾಜಸ್ತಾನದ 14 ನೇ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರು ತಮ್ಮ 57 ನೇ ಹುಟ್ಟುಹಬ್ಬದ ದಿನದಂದೇ ಡಿಸೆಂಬರ್ 15 ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಕಲ್‌ರಾಜ್ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
* ರಾಜಸ್ತಾನ ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರನ್ನು ನೇಮಕ ಮಾಡಲಾಗಿದೆ. ಡಿಸೆಂಬರ್ 15 ರಂದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
* ಐತಿಹಾಸಿಕ ಅಲ್ಬರ್ಟ್ ಹಾಲ್ ಮ್ಯೂಸಿಯಂ ಮುಂಭಾಗದ ರಾಮ ನಿವಾಸ್ ಬಾಗ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡಂತೆ ಹಲವಾರು ಬಿಜೆಪಿ ನಾಯಕರು ಪಾಲ್ಗೊಂಡರು.
* ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಕಾಂಗ್ರೆಸ್ ಅನ್ನು ಸೋಲಿಸಿ 199 ವಿಧಾನಸಭಾ ಸ್ಥಾನಗಳ ಪೈಕಿ 115 ಸ್ಥಾನಗಳನ್ನು ಗೆದ್ದುಕೊಂಡಿತು. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಿಮವಾಗಿ ಭಜನ್‌ಲಾಲ್ ಶರ್ಮಾ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.
ರಾಜಸ್ತಾನದ 14 ನೇ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಪ್ರಮಾಣ ವಚನ ಸ್ವೀಕಾರ
Published by Bhagya R K
16 ಡಿಸೆಂಬರ್ 2023