* ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಸಂಗನೇರ್ ವಿಧಾನಸಭಾ ಕ್ಷೇತ್ರದ ಶಾಸಕ ಭಜನ್ ಲಾಲ್ ಶರ್ಮಾ ಅವರು ಆಯ್ಕೆಯಾಗಿದ್ದಾರೆ. ಬ್ರಾಹ್ಮಣ ಸಮುದಾಯದ ಭಜನ್ ಲಾಲ್ ಶರ್ಮಾ ಅವರು ಭರತ್‌ಪುರ ಮೂಲದವರಾಗಿದ್ದಾರೆ.
* ರಾಜಸ್ಥಾನದ ನೂತನ ಉಪಮುಖ್ಯಮಂತ್ರಿಗಳಾಗಿ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಇಬ್ಬರು ಆಯ್ಕೆಯಾಗಿದ್ದಾರೆ. ಇನ್ನು ಸ್ಪೀಕರ್ ಆಗಿ ವಾಸುದೇವ ದೇವನಾನಿ ಅವರನ್ನು ಆಯ್ಕೆ ಮಾಡಲಾಗಿದೆ.
* ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ, ಎಲ್ಲಾ 199 ಸ್ಥಾನಗಳಿಗೆ ನವೆಂಬರ್ 25 ರಂದು ಚುನಾವಣೆ ನಡೆಯಿತು. ಅದರ ಫಲಿತಾಂಶಗಳು ಡಿಸೆಂಬರ್ 3 ರಂದು ಬಂದಿತ್ತು. ರಾಜಸ್ಥಾನ ವಿಧಾನಸಭಾ ಚುನಾವಣೆಯ ರಾಜಕೀಯ ಕದನದಲ್ಲಿ ಕಾಂಗ್ರೆಸ್ ಅನ್ನು ಸೋಲಿಸುವ ಮೂಲಕ ಬಿಜೆಪಿ 115 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್‌ಗೆ 69 ಸ್ಥಾನಗಳು ಮಾತ್ರ ಸಿಗಲಿವೆ. ಇದಲ್ಲದೇ 15 ಸ್ಥಾನಗಳು ಇತರರ ಪಾಲಾಗಿವೆ.
ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಆಯ್ಕೆ
Published by Yallamma G
13 ಡಿಸೆಂಬರ್ 2023