* ಕರ್ನಾಟಕ ರಾಜ್ಯದ 100 ಆಯ್ದ ಗ್ರಾಮಪಂಚಾಯತಿಗಳಲ್ಲಿ ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆ ಪ್ರಾರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಯೋಜನೆಯಡಿ ಸ್ವ-ಸಹಾಯ ಗುಂಪುಗಳ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ತರಬೇತಿ ನೀಡಲಾಗುತ್ತಿದ್ದು, ಪ್ರತಿ ಜಿಲ್ಲೆಯಿಂದ 3 ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಾಗುತ್ತದೆ.
* 2024-25 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ ತರಬೇತಿ ನೀಡಲು ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ರೂಪಿಸಲಾಗಿದೆ.
* ಪ್ರತಿಯೊಂದು ಜಿಲ್ಲೆಯಿಂದ ಆಯ್ದ 3 ಗ್ರಾಮ ಪಂಚಾಯಿತಿಗಳಂತೆ ಒಟ್ಟು 29 ಜಿಲ್ಲೆಗಳಿಗೆ 87 ಕೇಂದ್ರಗಳನ್ನು ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 7 ಮತ್ತು ತುಮಕೂರು ಜಿಲ್ಲೆ 6 ಕೇಂದ್ರಗಳನ್ನು ಸೇರಿ ಒಟ್ಟಾರೆ 100 ಕೇಂದ್ರಗಳನ್ನು ನರೇಗಾ ಯೋಜನೆ ಅಡಿಯಲ್ಲಿ ಅಂದಾಜು 17.50 ಲಕ್ಷ ರೂ.ಗಳಲ್ಲಿ ಕಾರ್ಯಾಗಾರ ನಡೆಸಲು ಪಂಚಾಯತ್ ರಾಜ್ ಆಯುಕ್ತಾಲಯ ಎಲ್ಲ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಸೂಚಿಸಿದೆ.
ರಾಜ್ಯದ 100 ಗ್ರಾಮಪಂಚಾಯತಿಗಳಲ್ಲಿ ಸಾವಿತ್ರಿಬಾಯಿ ಪುಲೆ ಯೋಜನೆ ಪ್ರಾರಂಭ
Published by Bhagya R K
22 ಆಗಸ್ಟ್ 2024