* ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅಕ್ಟೋಬರ್.28 (ಶನಿವಾರ) ರಂದು ನಡೆಯುವ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಒಡಿಶಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ವೈ. ಹನುಮಂತಪ್ಪ ಸೇರಿದಂತೆ ಎಂಟು ಮಂದಿಗೆ 'ರಾಜ್ಯಮಟ್ಟದ ವಾಲ್ಮೀಕಿ ಪ್ರಶಸ್ತಿ' ಪ್ರದಾನ ಮಾಡಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ತಿಳಿಸಿದರು.
* ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹನುಮಂತಪ್ಪ, ಧಾರ್ಮಿಕ ಕ್ಷೇತ್ರದಲ್ಲಿ ಮಹದೇವಮ್ಮ, ಶಿಕ್ಷಣ ಕ್ಷೇತ್ರದಲ್ಲಿ ರಾಮಣ್ಣ ಗಸ್ತಿ, ಸಾಮಾಜಿಕ ಕ್ಷೇತ್ರದಲ್ಲಿ ಜಿ.ಒ. ಮಹಂತಪ್ಪ, ಸಾಮಾಜಿಕ ಸೇವೆಗಾಗಿ ಸೋಮಣ್ಣ, ವೈದ್ಯಕೀಯ ಸೇವೆಗಾಗಿ ಶಾರದ ಪ್ರಭು ಹುಲಿ ನಾಯಕ, ಸಾಹಿತ್ಯ ಸೇವೆಗಾಗಿ ಸುಕನ್ಯಾ ಮಾರುತಿ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸುಜಾತಮ್ಮ ಸೇರಿದಂತೆ ಒಟ್ಟು ಎಂಟು ಜನರಿಗೆ ವಾಲ್ಮೀಕಿ ಪ್ರಶಸ್ತಿ ಸಿಗಲಿದೆ.
* ಈ ಪ್ರಶಸ್ತಿಯ ಪುರಸ್ಕೃತರಿಗೆ ಐದು ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ 20 ಗ್ರಾಂ ಚಿನ್ನದ ಪದಕ ಸಿಗಲಿದೆ’ ಎಂದು ಸಚಿವರು ತಿಳಿಸಿದ್ದು, ಈ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಮಾಡುವರು.
* ನಿವೃತ್ತ ಐಎಎಸ್ ಅಧಿಕಾರಿ ಬಿ. ಶಿವಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿಯು ಈ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದ್ದು, ಈ ಬಾರಿ ಪ್ರಶಸ್ತಿಗಳಿಗೆ 60 ವರ್ಷ ಮೇಲ್ಪಟ್ಟವರನ್ನು ಆಯ್ಕೆ ಮಾಡಲಾಗಿದೆ.
ಶನಿವಾರ, 28 ಅಕ್ಟೋಬರ್ 2023
11:10 ಪೂರ್ವಾಹ್ನ
Daily PDF
ರಾಜ್ಯದ ಎಂಟು ಜನ ಸಾಧಕರಿಗೆ ಮಹರ್ಷಿ ಶ್ರೀ ವಾಲ್ಮೀಕಿ ಪ್ರಶಸ್ತಿ ಪ್ರಧಾನ
Authored by:
Bhagya R K