*ಎಟಿಎಂ ಮಷಿನ್‌ಗಳ ಮೂಲಕ ಜನರು ಸುಲಭವಾಗಿ ಹಣ ಪಡೆಯಬಹುದು. ಆದರೆ ಇದೀಗ ರಾಜ್ಯದಲ್ಲಿ ಮೊದಲ ಬಾರಿಗೆ ಕಲಬುರಗಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೆಲ್ತ್ ಎಟಿಎಂ ಅನ್ನು ಆರಂಭಿಸಿದೆ. ಆದರೆ ಹೆಲ್ತ್ ಎಟಿಎಂ ಹಣ ನೀಡೋದಿಲ್ಲ. ಬದಲಾಗಿ ಹತ್ತೇ ನಿಮಿಷದಲ್ಲಿ ವ್ಯಕ್ತಿಯ ಆರೋಗ್ಯದ ರಿಪೋರ್ಟ್ ಕಾರ್ಡ್ ನೀಡುತ್ತದೆ.
*ಹೆಲ್ತ್ ಎಟಿಎಂ ಅಲ್ಲಿ ಪರೀಕ್ಷೆ ಮಾಡಿದಾಗ ವ್ಯಕ್ತಿಯೋರ್ವನ ಬಿಪಿ, ಶುಗರ್, ಹಿಮೋಗ್ಲೋಬಿನ್, ಮಲೇರಿಯಾ, ಡೆಂಗ್ಯೂ, ಚಿಕನಗುನ್ಯ ಜ್ವರದ ರಿಪೋರ್ಟ್, ಹೈಟ್, ವೇಟ್, ಆಕ್ಸಿಜನ್ ಪ್ರಮಾಣ, ಸೇರಿದಂತೆ ಐವತ್ತಕ್ಕೂ ಹೆಚ್ಚು ಪರೀಕ್ಷೆಗಳ ರಿಪೋರ್ಟ್ ನ್ನು ಕೇವಲ ಹತ್ತೇ ನಿಮಿಷದಲ್ಲಿ ಪರೀಕ್ಷೆ ಮಾಡಿ, ನಿಮಗೆ ನೀಡುತ್ತದೆ ಈ ಹೆಲ್ತ್ ಎಟಿಎಂ ಮಷಿನ್ ನಲ್ಲಿ ಇಸಿಜಿ ಸೌಲಭ್ಯವು ಕೂಡಾ ಇದೆ.
*ಸೆಪ್ಟೆಂಬರ್ 17 ರಂದು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನ, ಸಿಎಂ ಸಿದ್ದರಾಮಯ್ಯ ಹೆಲ್ತ್ ಎಟಿಎಂಗೆ ಚಾಲನೆ ನೀಡಿದ್ದರು. ಇದೀಗ ಅವುಗಳು ಕಾರ್ಯಾಚರಣೆ ಆರಂಭಿಸಿವೆ.
ರಾಜ್ಯದ ಮೊದಲ ಹೆಲ್ತ್ ಎಟಿಎಂ ಕಲಬುರಗಿಯಲ್ಲಿ ಪ್ರಾರಂಭ; ಹತ್ತೇ ನಿಮಿಷದಲ್ಲಿ ಸಿಗುತ್ತೆ ಐವತ್ತು ಪರೀಕ್ಷೆಗಳ ವರದಿ
Published by Akshata Halli
25 ಸೆಪ್ಟೆಂಬರ್ 2023