* ರಾಜ್ಯದ ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ 'ಮಹರ್ಷಿ ವಾಲ್ಮೀಕಿ ವಸತಿ ಶಾಲೆಗಳು' ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 17 ರಂದು ಘೋಷಿಸಿದ್ದಾರೆ.
* ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, "ರಾಜ್ಯದ ಎಲ್ಲಾ ಸರ್ಕಾರಿ ವಸತಿ ಶಾಲೆಗಳನ್ನು ಮಹರ್ಷಿ ವಾಲ್ಮೀಕಿ ವಸತಿ ಶಾಲೆಗಳು ಎಂದು ಮರುನಾಮಕರಣ ಮಾಡಲಾಗುವುದು. ರಾಯಚೂರು ವಿಶ್ವವಿದ್ಯಾಲಯವನ್ನು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದರು.
* ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಅಲ್ಪಸಂಖ್ಯಾತ ಸಮುದಾಯಗಳ ಸಮಾನತೆಯನ್ನು ಉತ್ತೇಜಿಸುವಲ್ಲಿ ಬಿಜೆಪಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಟೀಕಿಸಿದರು.
* ಯಾವುದೇ ಬಿಜೆಪಿ ಆಡಳಿತದ ರಾಜ್ಯವು ಎಸ್‌ಸಿಪಿ ಮತ್ತು ಟಿಎಸ್‌ಪಿಗೆ ಹಣ ಮೀಸಲಿಡಲು ತಿದ್ದುಪಡಿ ತಂದಿಲ್ಲ. SCSP/TSP ಮೂಲಕ SC/ST ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಬಿಜೆಪಿ ಮಾತ್ರ ಅದನ್ನು ಜಾರಿಗೆ ತರಲು ಏನನ್ನೂ ಮಾಡದೆ ಸಮಾನತೆಯ ಬಗ್ಗೆ ಮಾತನಾಡುತ್ತಾರೆ” ಎಂದು ತಿರುಗೇಟು ನೀಡಿದರು.
* ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತಿ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.
ರಾಜ್ಯದ ಪರಿಶಿಷ್ಟ ಪಂಗಡ ವಸತಿ ಶಾಲೆಗಳಿಗೆ ''ಮಹರ್ಷಿ ವಾಲ್ಮೀಕಿ'' ಎಂದು ಮರುನಾಮಕರಣ : ಸಿಎಂ. ಸಿದ್ದರಾಮಯ್ಯ
Published by Jyoti Angadi
21 ಅಕ್ಟೋಬರ್ 2024