* ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 'ಗೌರವ ದತ್ತಿ ಪ್ರಶಸ್ತಿಗೆ' ಜಾನಪದ ವಿದ್ವಾಂಸ ಮೈಸೂರಿನ ಹಿ. ಶಿ. ರಾಮಚಂದ್ರೇಗೌಡ ಮತ್ತು ವಿಮರ್ಶಕಿ ಬೆಂಗಳೂರಿನ ಸುಮಿತ್ರಾಬಾಯಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
* ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಶಿ ಅವರ ನೇತೃತ್ವದಲ್ಲಿ 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ 30 ಸಾವಿರ ನಗದು ಬಹುಮಾನವನ್ನು ಒಳಗೊಂಡಿದೆ.
* ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಅವರು ಈ ಪ್ರಶಸ್ತಿ ಸ್ಥಾಪಿಸಿದ್ದಾರೆ.
* ಹಿ.ಶಿ.ರಾಮಚಂದ್ರೇಗೌಡ ಅವರು ಕೇರಳದಲ್ಲಿ ಜಾನಪದದ ಕುರಿತು ಅಧ್ಯಯನ ಮಾಡಿದ್ದರು. ಅವರು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
* ಬಿ.ಎನ್. ಸುಮಿತ್ರಾಬಾಯಿ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹಾಸನದ ಎ.ವಿ.ಕಾಂತಮ್ಮ ಮತ್ತು ಬೆಂಗಳೂರಿನ ಎ.ಪಿ.ಎಸ್.ವಾಣಿಜ್ಯ ಕಾಲೇಜಿನಲ್ಲಿ ಸಂಸ್ಕೃತ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ್ದಾರೆ.
ರಾಮಚಂದ್ರೇಗೌಡ, ಸುಮಿತ್ರಾಬಾಯಿಗೆ 'ಕಸಾಪ ಗೌರವ ಪ್ರಶಸ್ತಿ'
Published by Akshata Halli
03 ಮೇ 2024