* ಕೇಂದ್ರ ಸರ್ಕಾರ ನಿವೃತ್ತ ಐಪಿಎಸ್ ಅಧಿಕಾರಿ ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ಮರು ನೇಮಕ ಮಾಡಿದೆ.
* ಪ್ರಧಾನಿ ಮೋದಿ ಅವರ ಅಧಿಕಾರಾವಧಿವರೆಗೂ ಅಥವಾ ಮುಂದಿನ ಆದೇಶದ ವರೆಗೆ ಅಜಿತ್ ದೋವಲ್ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮುಂದುವರೆಯಲಿದ್ದಾರೆ.
* 10.06.2024 ರಿಂದ ಜಾರಿಗೆ ಬರುವಂತೆ ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಲು ಸಂಪುಟದ ನೇಮಕಾತಿ ಸಮಿತಿಯು
ಅನುಮೋದನೆ ನೀಡಿದೆ" ಎಂದು ಸಿಬ್ಬಂದಿ ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
* ದೋವಲ್ ಅವರಿಗೆ ಕಾರ್ಯನಿರ್ವಹಣಾ ಅವಧಿಯಲ್ಲಿ ದೋವಲ್ ಅವರಿಗೆ ಪ್ರಾಶಸ್ತ್ಯದ ಕೋಷ್ಟಕದಲ್ಲಿ ಕ್ಯಾಬಿನೆಟ್ ಸಚಿವ ಸ್ಥಾನವನ್ನು ನಿಗದಿಪಡಿಸಲಾಗುವುದು, ಅವರ ನೇಮಕಾತಿಯ ನಿಯಮಗಳು ಮತ್ತು ಷರತ್ತುಗಳನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.
ಶುಕ್ರವಾರ, 14 ಜೂನ್ 2024
11:28 ಪೂರ್ವಾಹ್ನ
Daily PDF
ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಮರುನೇಮಕ
Authored by:
Yallamma G