* ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿಮಿಟೆಡ್ (KREDL -The Karnataka Renewable Energy Development Limited) ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.* ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು.* ರಾಜ್ಯಾದ್ಯಂತ ಸುಸ್ಥಿರ ಇಂಧನ ಪದ್ಧತಿಗಳನ್ನು ಉತ್ತೇಜಿಸುವ ಕ್ರೆಡಲ್, ಈ ನಿಟ್ಟಿನಲ್ಲಿ ಅನುಷ್ಠಾನಗೊಳಿಸಿರುವ ಇಂಧನ ದಕ್ಷತೆ ಯೋಜನೆಗಳನ್ನು ಗುರುತಿಸಿ ಕೇಂದ್ರ ಇಂಧನ ಸಚಿವಾಲಯ ಈ ಪ್ರಶಸ್ತಿ ನೀಡಿದೆ.* ಈ ಬಾರಿ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದ್ದು, ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.* ಕರ್ನಾಟಕವು ಹಿಂದಿನ ಮೂರು ವರ್ಷಗಳಿಂದ ಅಂದರೆ S.S.E.I 2020 ಮತ್ತು S.E.E.I 2021-2022, 2023ರ ಅವಧಿಯಲ್ಲಿ “ಫ್ರಂಟ್ ರನ್ನರ್” ಎಂಬ ಮನ್ನಣೆಗೆ ಪಾತ್ರವಾಗಿತ್ತು.* ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ, ರಾಜ್ಯ ಇಂಧನ ದಕ್ಷತೆ ಸೂಚ್ಯಂಕ (S.E.E.I) 2023ರಲ್ಲಿ ಕರ್ನಾಟಕವು 85.75 ಅತ್ಯಧಿಕ ಅಂಕಗಳನ್ನು ಗಳಿಸುವ ಮೂಲಕ ದೇಶದಲ್ಲೇ ಉತ್ತಮ ಕಾರ್ಯನಿರ್ವಹಣೆಯ ರಾಜ್ಯ ಎಂಬ ಸ್ಥಾನ ಪಡೆದಿತ್ತು.