* ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿಮಿಟೆಡ್ (KREDL -The Karnataka Renewable Energy Development Limited) ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
* ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು.
* ರಾಜ್ಯಾದ್ಯಂತ ಸುಸ್ಥಿರ ಇಂಧನ ಪದ್ಧತಿಗಳನ್ನು ಉತ್ತೇಜಿಸುವ ಕ್ರೆಡಲ್, ಈ ನಿಟ್ಟಿನಲ್ಲಿ ಅನುಷ್ಠಾನಗೊಳಿಸಿರುವ ಇಂಧನ ದಕ್ಷತೆ ಯೋಜನೆಗಳನ್ನು ಗುರುತಿಸಿ ಕೇಂದ್ರ ಇಂಧನ ಸಚಿವಾಲಯ ಈ ಪ್ರಶಸ್ತಿ ನೀಡಿದೆ.
* ಈ ಬಾರಿ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದ್ದು, ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.
* ಕರ್ನಾಟಕವು ಹಿಂದಿನ ಮೂರು ವರ್ಷಗಳಿಂದ ಅಂದರೆ S.S.E.I 2020 ಮತ್ತು S.E.E.I 2021-2022, 2023ರ ಅವಧಿಯಲ್ಲಿ “ಫ್ರಂಟ್ ರನ್ನರ್” ಎಂಬ ಮನ್ನಣೆಗೆ ಪಾತ್ರವಾಗಿತ್ತು.
* ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ, ರಾಜ್ಯ ಇಂಧನ ದಕ್ಷತೆ ಸೂಚ್ಯಂಕ (S.E.E.I) 2023ರಲ್ಲಿ ಕರ್ನಾಟಕವು 85.75 ಅತ್ಯಧಿಕ ಅಂಕಗಳನ್ನು ಗಳಿಸುವ ಮೂಲಕ ದೇಶದಲ್ಲೇ ಉತ್ತಮ ಕಾರ್ಯನಿರ್ವಹಣೆಯ ರಾಜ್ಯ ಎಂಬ ಸ್ಥಾನ ಪಡೆದಿತ್ತು.
ರಾಷ್ಟ್ರೀಯ ಇಂಧನ ಸಂರಕ್ಷಣೆ 2024’ ಕರ್ನಾಟಕಕ್ಕೆ 2ನೇ ಸ್ಥಾನ, ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಪ್ರಶಸ್ತಿ
Published by Jyoti Angadi
16 ಡಿಸೆಂಬರ್ 2024