* ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾರ್ಚ್ 15ರಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ವಹಿವಾಟು ಸ್ಥಗಿತಗೊಳಿಸಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ದೇಶದ 3 ಬ್ಯಾಂಕ್‌ಗಳಿಗೆ ಆರ್‌ಬಿಐ ಸುಮಾರು 3 ಕೋಟಿ ರೂ.ದಂಡ ವಿಧಿಸಿದೆ.
* ಭಾರತೀಯ ಸ್ಟೇಟ್ ಬ್ಯಾಂಕ್ (SBI), ಕೆನರಾ ಬ್ಯಾಂಕ್ ಹಾಗೂ ಸಿಟಿ ಯೂನಿಯನ್ ಬ್ಯಾಂಕ್‌ಗಳಿಗೆ (City Union Bank) ಸುಮಾರು 3 ಕೋಟಿ ರೂ. ದಂಡ ವಿಧಿಸಲಾಗಿದೆ. ಆರ್‌ಬಿಐ ನಿಬಂಧನೆಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.
* ಭಾರತೀಯ ಸ್ಟೇಟ್ ಬ್ಯಾಂಕ್ (SBI)ಗೆ 2 ಕೋಟಿ ರೂ. ದಂಡ ವಿಧಿಸಲಾಗಿದ್ದು, ಠೇವಣಿದಾರರ ಶೈಕ್ಷಣಿಕ ಜಾಗೃತಿ ಫಂಡ್ ಯೋಜನೆ (2014) ಅಡಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದಂಡ ವಿಧಿಸಿದೆ.
* ಆದಾಯ ಗುರುತಿಸುವ ಮಾನದಂಡಗಳು, ಅನುತ್ಪಾದಕ ಆಸ್ತಿ ಪತ್ತೆಹಚ್ಚುವಲ್ಲಿ ಚ್ಯುತಿ ಸೇರಿ ಹಲವು ಕಾರಣಗಳಿಂದಾಗಿ ಸಿಟಿ ಯುನಿಯನ್ ಬ್ಯಾಂಕ್‌ಗೆ 66 ಲಕ್ಷ ರೂ. ದಂಡ ವಿಧಿಸಿದೆ.
* ಆರ್‌ಬಿಐ ನಿರ್ದೇಶನಗಳನ್ನು ಪಾಲಿಸುವಲ್ಲಿ ವಿಫಲವಾದ ಕೆನರಾ ಬ್ಯಾಂಕ್‌ಗೆ 32.30 ಲಕ್ಷ ರೂ. ದಂಡ ವಿಧಿಸಿದೆ.
* ಆರ್ ಬಿಐ ಸಾಲ ಮರುಪಾವತಿಸಿದ 30 ದಿನದೊಳಗೆ ಆಸ್ತಿ ದಾಖಲೆ ವಾಪಸ್ ನೀಡಿ; ತಡ ಮಾಡಿದರೆ ದಿನಕ್ಕೆ 5 ಸಾವಿರ ರು. ದಂಡ ವಿಧಿಸಲಾಗುತ್ತದೆ.
* ನಿಯಮಗಳನ್ನು ಪಾಲಿಸುವಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಆರ್‌ಬಿಐ ದಂಡ ವಿಧಿಸುತ್ತದೆ. ಈ ರೀತಿ ಬ್ಯಾಂಕಿಂಗ್‌ಯೇತರ ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಒಡಿಶಾ ಮೂಲದ ಓಶಿಯನ್ ಕ್ಯಾಪಿಟಲ್ ಮಾರ್ಕೆಟ್ ಲಿಮಿಟೆಡ್, ರೌರ್ಕೇಲಾಗೆ 16 ಲಕ್ಷ ರೂ. ದಂಡ ವಿಧಿಸಲಾಗಿದೆ.
* ಆರ್‌ಬಿಐ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಪೇಟಿಎಂ ವಹಿವಾಟು ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಒಂದೇ ಒಂದು ಪರ್ಮನೆಂಟ್ ಅಕೌಂಟ್ ನಂಬರ್ (ಪ್ಯಾನ್) ಮೂಲಕ 1,000 ಕ್ಕೂ ಹೆಚ್ಚು ಖಾತೆಗಳನ್ನು ಲಿಂಕ್ ಮಾಡಿರುವುದು ಕಂಡುಬಂದಿದೆ.
* ಆರ್‌ಬಿಐ ಮತ್ತು ಲೆಕ್ಕಪರಿಶೋಧಕರು ನಡೆಸಿದ ಪರಿಶೀಲನಾ ಪ್ರಕ್ರಿಯೆಗಳಲ್ಲಿ ಬ್ಯಾಂಕ್ ಸಲ್ಲಿಸಿದ ಮಾಹಿತಿ ತಪ್ಪಾಗಿದೆ ಎಂದು ತಿಳಿದುಬಂದಿತ್ತು. ಕೆಲವು ಖಾತೆಗಳನ್ನು ಅಕ್ರಮ ಹಣ ವರ್ಗಾವಣೆಗೆ ಬಳಸಿರಬಹುದು ಎಂದು ಆರ್‌ಬಿಐ ಕಳವಳ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಬುಧವಾರ, 28 ಫೆಬ್ರುವರಿ 2024
10:31 ಪೂರ್ವಾಹ್ನ
Daily PDF
SBI ಸೇರಿ 3 ಬ್ಯಾಂಕ್‌ಗಳಿಗೆ 3 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ
Authored by:
Bhagya R K