* ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ 83 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಬಳಿಸಿದರು. 83 ರನ್‌ಗಳಿಗೆ 5 ವಿಕೆಟ್‌ಗಳನ್ನು ಪಡೆಯುವ ಮೂಲಕ ಬುಮ್ರಾ SENA (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) ದೇಶಗಳಲ್ಲಿ 150 ಟೆಸ್ಟ್ ವಿಕೆಟ್‌ಗಳನ್ನು ಪಡೆದ ಏಷ್ಯಾದ ಮೊದಲ ಬೌಲರ್ ಎನಿಸಿಕೊಂಡರು.
* ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯವು ಬುಮ್ರಾ ಅವರ ಸೆನಾ ದೇಶಗಳಲ್ಲಿ 32 ನೇ ಟೆಸ್ಟ್ ಪಂದ್ಯವಾಗಿದ್ದು, ಈಗ ಅವರು ಒಟ್ಟು 150 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
* SENA ದೇಶಗಳಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್‌ಗಳು (ಏಷ್ಯನ್ ಬೌಲರ್‌ಗಳಿಂದ) :
ಜಸ್ಪ್ರೀತ್ ಬುಮ್ರಾ – 150*
ವಾಸಿಂ ಅಕ್ರಮ್ - 146
ಅನಿಲ್ ಕುಂಬ್ಳೆ - 141
ಇಶಾಂತ್ ಶರ್ಮಾ - 130
ಮುತ್ತಯ್ಯ ಮುರಳೀಧರನ್ - 125
* ಇಂಗ್ಲೆಂಡ್‌ನಲ್ಲಿ ಇದುವರೆಗೆ ಆಡಿರುವ 10 ಟೆಸ್ಟ್‌ಗಳಲ್ಲಿ ಬುಮ್ರಾ 42 ವಿಕೆಟ್‌ಗಳನ್ನು ಪಡೆದಿದ್ದಾರೆ. ನ್ಯೂಜಿಲೆಂಡ್‌ನಲ್ಲಿ ನಡೆದ ಎರಡು ಟೆಸ್ಟ್‌ಗಳಲ್ಲಿ 6 ವಿಕೆಟ್‌ಗಳು, ಆಸ್ಟ್ರೇಲಿಯಾದಲ್ಲಿ ನಡೆದ 12 ಟೆಸ್ಟ್‌ಗಳಲ್ಲಿ 64 ವಿಕೆಟ್‌ಗಳು ಮತ್ತು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎಂಟು ಟೆಸ್ಟ್‌ಗಳಲ್ಲಿ 38 ವಿಕೆಟ್‌ಗಳನ್ನು ಪಡೆದಿದ್ದಾರೆ.
SENA ದೇಶಗಳಲ್ಲಿ 150 ವಿಕೆಟ್ ಪಡೆದ ಮೊದಲ ಏಷ್ಯನ್ ಬೌಲರ್ ಜಸ್ಪ್ರೀತ್ ಬುಮ್ರಾ
Published by Jyoti Angadi
23 ಜೂನ್ 2025