* ಶಿಕ್ಷಣ ತಜ್ಞ ಗುರುರಾಜ ಕರಜಗಿ ಅವರು ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಹಾಗೂ ಭಾರತೀಯ ವಿದ್ಯಾಭವನ ಕೊಡಮಾಡುವ 2024 ನೇ ಸಾಲಿನ ವಿ.ಕೃ. ಗೋಕಾಕ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
* ಟ್ರಸ್ಟ್‌ನ ಅಧ್ಯಕ್ಷರಾದ ಡಾ. ನರಹಳ್ಳಿ ಬಾಲ ಸುಬ್ರಹ್ಮಣ್ಯ, ಹಾಗೂ ಅನಿಲ್ ಗೋಕಾಕ್, ಎಚ್.ಎನ್. ಸುರೇಶ್, ಅಭಿನವ ರವಿಕುಮಾರ್ ಅವರು ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದು ಕರಜಗಿ ಅವರನ್ನು 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
* ಸೆಪ್ಟೆಂಬರ್ 29 ರಂದು ಭಾರತೀಯ ವಿದ್ಯಾಭವನದಲ್ಲಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
* ಈ ಪ್ರಶಸ್ತಿಯು 25,000 ನಗದು ಮತ್ತು ಫಲಕವನ್ನೊಳಗೊಂಡಿದ್ದು, ಈ ಪ್ರಶಸ್ತಿ ಪ್ರದಾನ ಸಮಾರಂಭವು 2024 ಸೆಪ್ಟೆಂಬರ್.29 ಭಾನುವಾರದಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದಲ್ಲಿ ಸರಸ್ವತಿ ಸಮ್ಮಾನ್ ಪುರಸ್ಕೃತ ಲೇಖಕರು ಮತ್ತು ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯಿಲಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಶಿಕ್ಷಣ ತಜ್ಞ ಗುರುರಾಜ ಕರಜಗಿ ಅವರಿಗೆ ವಿ.ಕೃ ಗೋಕಾಕ್ ಪ್ರಶಸ್ತಿ
Published by Bhagya R K
26 ಸೆಪ್ಟೆಂಬರ್ 2024