* ಕರ್ನಾಟಕ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ಪವಾರ್ ಅವರನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ಜಂಟಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
* ಐದು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಇರಲಿದ್ದಾರೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ. ಪ್ರವೀಣ್ ಮಧುಕರ್ ಅವರು 2003 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದರು.
* ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರು ಈ ವರ್ಷದ ಮೇ ತಿಂಗಳಿನಲ್ಲಿ ಕೇಂದ್ರೀಯ ತನಿಖಾ ದಳದ ನಿರ್ದೇಶಕರಾಗಿ ನೇಮಕವಾಗಿದ್ದರು.
* ನಿಯಮಗಳ ಪ್ರಕಾರ, ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ನೇಮಕಾತಿಯ ಅವಧಿಯನ್ನು ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸಬಹುದು.
ಸಿಬಿಐ ಜಂಟಿ ನಿರ್ದೇಶಕರಾಗಿ ಕರ್ನಾಟಕದ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ನೇಮಕ
Published by Bhagya R K
06 ನವೆಂಬರ್ 2023