* ಭಾರತೀಯ ಮೂಲದ ಸಿಂಗಾಪುರದ ಅರ್ಥಶಾಸ್ತ್ರಜ್ಞ ಥರ್ಮನ್ ಷಣ್ಮುಗರತ್ನಂ ಅವರು ಸೆ.15 ಶುಕ್ರವಾರ ದಿನದಂದು ಸಿಂಗಾಪುರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
* ಇಸ್ತಾನದಲ್ಲಿ ಭಾರತ ಮೂಲಕ ಮುಖ್ಯ ನ್ಯಾಯಮೂರ್ತಿ ಸುಂದರೇಶ್ ಮೆನನ್ ಥರ್ಮನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
* ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಷಣ್ಮುಗರತ್ನಂ ಅವರು, ಚೀನಾ ಮೂಲದ ಇಬ್ಬರು ಪ್ರತಿಸ್ಪರ್ಧಿಗಳನ್ನು ಸೋಲಿಸಿ, ಸಿಂಗಾಪುರದ 9ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
* ಷಣ್ಮುಗರತ್ನಂ ಅವರು ಶೇ. 70.4 ರಷ್ಟು ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿಗಳಾದ ಎನ್‌ಜಿ ಕೊಕ್ ಸಾಂಗ್ ಮತ್ತು ತಾನ್ ಕಿನ್ ಲಿಯಾನ್ ಅವರು ಕ್ರಮವಾಗಿ ಶೇಕಡಾ 15.7 ಮತ್ತು 13.88 ರಷ್ಟು ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.
ಶನಿವಾರ, 16 ಸೆಪ್ಟೆಂಬರ್ 2023
4:55 ಅಪರಾಹ್ನ
Daily PDF
ಸಿಂಗಾಪುರ್ ಅಧ್ಯಕ್ಷರಾಗಿ ಭಾರತೀಯ ಮೂಲದ ಥರ್ಮನ್ ಆಯ್ಕೆ
Authored by:
Bhagya R K