* ಸನ್ಸೇರಾ ಕಂಪನಿಯು ವಾಹನಗಳು ಮತ್ತು ವೈಮಾನಿಕ ಬಿಡಿಭಾಗಗಳನ್ನು ತಯಾರಿಸುವ ಕಂಪನಿಯಾಗಿದ್ದು, ರಾಜ್ಯದಲ್ಲಿ ₹2100 ಕೋಟಿ ಹೂಡಿಕೆ ಮಾಡಲಿದೆ. ಈ ಸಂಬಂಧ ಕೈಗಾರಿಕಾ ಇಲಾಖೆ ಜತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ.
* ಜುಲೈ 31 ರಂದು ಖನಿಜ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲರ ಸಮ್ಮುಖದಲ್ಲಿ ಇಲಾಖೆಯ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಸನ್ಸೇರಾ ಕಂಪನಿಯ ಸಿಇಓ ಶೇಖರ್ ವಾಸನ್ ಅವರು ಒಪ್ಪಂದಕ್ಕೆ ಸಹಿ ಹಾಕಿದರು.
* ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 55 ಎಕರೆ ಪ್ರದೇಶದಲ್ಲಿ ತನ್ನ ಉತ್ಪಾದನಾ ಘಟಕ ಆರಂಭಿಸಲಿರುವ ಕಂಪನಿ 3,500 ಜನರಿಗೆ ಉದ್ಯೋಗ ನೀಡಲಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.ಇದರಿಂದ ರಾಜ್ಯದ ರಫ್ತು ವಹಿವಾಟಿಗೂ ಅನುಕೂಲ ಆಗಲಿದೆ ಎಂದು ವಿವರಿಸಿದರು.
* ಕಂಪನಿಯು ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ತರಬೇತಿ ಕೇಂದ್ರ ಆರಂಭಿಸಲಿದ್ದು, ಇದರಿಂದ ಸ್ಥಳೀಯರ ಕೌಶಲ್ಯ ವೃದ್ಧಿಯಾಗಲಿದೆ.
* ಸನ್ಸೇರಾ ಕಂಪನಿಯು ದೇಶದಲ್ಲಿ 16 ತಯಾರಿಕಾ ಘಟಕಗಳನ್ನು ಹೊಂದಿದ್ದು, ಅವುಗಳ ಪೈಕಿ 12 ಘಟಕಗಳು ರಾಜ್ಯದಲ್ಲೇ ಇವೆ ಎಂಬುದು ಗಮನಾರ್ಹ ಎಂದು ಎಂ.ಬಿ.ಪಾಟೀಲರು ಮಾಹಿತಿ ನೀಡಿದರು.
ಗುರುವಾರ, 01 ಆಗಸ್ಟ್ 2024
1:53 ಅಪರಾಹ್ನ
Daily PDF
ಸನ್ಸೇರಾ ಜತೆ ರಾಜ್ಯ ಸರ್ಕಾರ ₹2100 ಕೋಟಿ ಹೂಡಿಕೆಗೆ ಒಪ್ಪಂದ
Authored by:
Jyoti Angadi