* ದೇಶದ ಅತೀ ದೊಡ್ಡ 17 ಮೃಗಾಲಯಗಳ ಪೈಕಿ ಒಂದಾಗಿರುವ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನ ಪ್ರಾಣಿಗಳ ಸಂತಾನಾಭಿವೃದ್ಧಿಯಲ್ಲಿ ದೇಶದಲ್ಲೇ ನಂಬರ್ 1 ಎಂಬ ಗೌರವಕ್ಕೆ ಪಾತ್ರವಾಗಿದೆ. ಅದರಲ್ಲೂ ದೇಶದಲ್ಲಿ ಅಪರೂಪದ ಹುಲಿ, ಕಾಡು, ಶ್ವಾನ, ಕಾಳಿಂಗ, ರಿಯಾ ಜಾತಿಯ ಹಕ್ಕಿಯ ಸಂತಾನಾಭಿವೃದ್ಧಿಯಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿದೆ.
* ನಮ್ಮ ದೇಶದಲ್ಲಿ 164 ಮಾನ್ಯತೆ ಪಡೆದ ಮೃಗಾಲಯವಿದ್ದು, ಅದರಲ್ಲಿ ಒಟ್ಟು ಅತಿ ದೊಡ್ಡ 17 ಮೃಗಾಲಯಗಳು ಇದೆ. ಅದರಲ್ಲಿ ಮಂಗಳೂರಿನ ಪಿಲಿಕುಳ ಕೂಡ ಒಂದಾಗಿದೆ
* ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಡಿ ಪಿಲಿಕುಳ ಮೃಗಾಲಯ ಬರುತ್ತದೆ. ಈ ಉದ್ಯಾನ 150 ಎಕರೆ ವ್ಯಾಪ್ತಿಯನ್ನು ಹೊಂದಿದೆ.
* ಕಾಳಿಂಗ ಸರ್ಪದ ಸಂತಾನೋತ್ಪತ್ತಿ ಮಂಗಳೂರಿನ ಪಿಲಿಕುಳದಲ್ಲಿ ಮಾತ್ರ ಆಗುತ್ತಿದೆ. ಕಾಳಿಂಗ ಸರ್ಪದ ವೈಜ್ಞಾನಿಕವಾಗಿ ಸಂತಾನೋತ್ಪತ್ತಿ ಮಾಡುತ್ತಿದ್ದು, ಈಗಾಗಲೇ 180 ಮರಿಗಳಾಗಿದೆ. ಹೆಚ್ಚುವರಿ ಕಾಳಿಂಗ ಮರಿಗಳನ್ನು ಕಾಡಿಗೆ ಬಿಡಲಾಗಿದೆ. ಈ ಸಂತಾನಾಭಿವೃದ್ಧಿ ಹೆಚ್ಚಲು ಪಿಲಿಕುಳದಲ್ಲಿರುವ ವಾತಾವರಣದ, ಆರೈಕೆಯು ಬಹಳ ಮುಖ್ಯವಾಗಿದೆ.
ಸೋಮವಾರ, 26 ಜೂನ್ 2023
11:11 ಪೂರ್ವಾಹ್ನ
Daily PDF
ಸಂತಾನೋತ್ಪತ್ತಿಯಲ್ಲಿ ದೇಶದಲ್ಲಿಯೇ ಟಾಪ್ 1 ಮಂಗಳೂರು ಪಿಲಿಕುಳ ಮೃಗಾಲಯ
Authored by:
Akshata Halli