* ಭಾರತೀಯ ರಿಸರ್ವ್ ಬ್ಯಾಂಕ್ (RBI) ಸತತ 10ನೇ ಬಾರಿಗೆ ರೆಪೋ ದರವನ್ನು (Repo Rate) ಯಥಾಸ್ಥಿತಿಯಲ್ಲೇ ಮುಂದುವರಿಸಿದೆ. ಕೊನೆಯದ್ದಾಗಿ 2023ರ ಫೆಬ್ರವರಿ 8ರಂದು ನಡೆದ ಸಭೆಯಲ್ಲಿ ಆರ್‌ಬಿಐ ರೆಪೋ ದರ ಏರಿಕೆ ಮಾಡಿತ್ತು.
* ಬುಧವಾರ(ಅ.09) ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆರ್ ಬಿಐ ಗವರ್ನರ್ ಶಕ್ತಿದಾಸ್ ದಾಸ್ ಅವರು 2024-25ನೇ ಸಾಲಿನ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆಯು 7.2% ರಷ್ಟಾಗುವ ಮುನ್ಸೂಚನೆ ಇದೆ. ರೆಪೋ ದರದಲ್ಲಿ ಯಾವುದೇ ಬದಲಾವಣೆ ತರದೇ 6.5% ನಲ್ಲೇ ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರಲ್ಲಿ ಪೈಕಿ 5:1 ರಷ್ಟು ಸದಸ್ಯರು ಈ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದರು ಎಂದು ತಿಳಿಸಿದರು.
* ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರವನ್ನು ಇಳಿಕೆ ಮಾಡಿದ ಬೆನ್ನಲ್ಲೇ ಭಾರತದಲ್ಲೂ ಆರ್‌ಬಿಐ ಬಡ್ಡಿ ದರವನ್ನು ಇಳಿಕೆ ಮಾಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಇಸ್ರೇಲ್-ಇರಾನ್ ನಡುವೆ ಯುದ್ಧ ಭೀತಿಯಿಂದಾಗಿ ಬಡ್ಡಿದರವನ್ನು ಇಳಿಸದ ಆರ್‌ಬಿಐ ಯಥಾಸ್ಥಿತಿಯನ್ನೇ ಕಾಯ್ದುಕೊಂಡಿದೆ.
* ವಾಣಿಜ್ಯ ಬ್ಯಾಂಕ್‌ಗಳ ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರಕ್ಕೆ ರೆಪೋ ದರ ಎನ್ನುತ್ತಾರೆ.
* ರೆಪೋ ದರ ಕಡಿಮೆಯಾದರೆ ಬ್ಯಾಂಕ್‌ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಹಣವನ್ನು ಪಡೆಯಬಹುದು. ಬ್ಯಾಂಕ್‍ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತಿರುತ್ತವೆ. ರೆಪೋ ರೇಟ್ ಜಾಸ್ತಿ ಇದ್ದರೆ ಬ್ಯಾಂಕ್‌ಗಳು ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡುತ್ತದೆ. ಇದರಿಂದ ವಾಹನ ಸಾಲ, ಗೃಹ ಸಾಲ್ಯ ಇತ್ಯಾದಿ ಸಾಲಗಳ ಬಡ್ಡಿ ದರ ಏರುತ್ತದೆ.
ಗುರುವಾರ, 10 ಅಕ್ಟೋಬರ್ 2024
12:13 ಅಪರಾಹ್ನ
Daily PDF
ಸತತ 10ನೇ ಬಾರಿ ರೆಪೋದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ RBI
Authored by:
Yallamma G