* 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆದ್ದು, ಸತತ ಮೂರನೇ ಅವಧಿಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಅಧಿಕಾರಕ್ಕೆ ಬಂದಿದ್ದು, ಎರಡನೇ ಅವಧಿಗೆ ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರು ಇಂದು(ಅಕ್ಟೋಬರ್ 17) ಪ್ರಮಾಣ ವಚನ ಸ್ವೀಕರಿಸಿದರು.
* ಇಂದು ಪಂಚಕುಲದಲ್ಲಿ ನಡೆದ ಸಮಾರಂಭದಲ್ಲಿ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸೈನಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
* ಸೈನಿ ಅವರೊಂದಿಗೆ ಅಂಬಾಲಾ ಕ್ಯಾಂಟ್ ಶಾಸಕ ಅನಿಲ್ ವಿಜ್, ಇಸ್ರಾನಾ ಶಾಸಕ ಕ್ರಿಶನ್ ಲಾಲ್ ಪನ್ವಾರ್ ಮತ್ತು ಬಾದಶಹಪುರ ಶಾಸಕ ರಾವ್ ನರಬೀರ್ ಸಿಂಗ್ ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
* ನಯಾಬ್ ಸೈನಿ ಈ ಹಿಂದೆ OBC ಸಂಸದರಾಗಿ ಸೇವೆ ಸಲ್ಲಿಸಿದರು ಮತ್ತು 1996 ರಿಂದ ಹರಿಯಾಣದ ಬಿಜೆಪಿ ಘಟಕದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದರು. ಮತ್ತು ಸರ್ಕಾರವನ್ನು ರಚಿಸಲು ಹಕ್ಕು ಸಾಧಿಸುವ ಮೊದಲು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದರು.
* ಸೈನಿ ಅವರ ನಾಯಕತ್ವವು ಬಿಜೆಪಿ ನಿರ್ಗಮನ ಸಮೀಕ್ಷೆಗಳನ್ನು ಧಿಕ್ಕರಿಸಿ ಐತಿಹಾಸಿಕ ಮೂರನೇ ಅವಧಿಯನ್ನು ಸಾಧಿಸಿದ್ದಾರೆ.
* ಸೈನಿ ಅವರು ಪ್ರಮಾಣವಚನ ಸ್ವೀಕರಿಸುವ ಮುನ್ನ ವಾಲ್ಮೀಕಿ ಭವನಕ್ಕೆ ಭೇಟಿ ನೀಡಿದರು ಮತ್ತು ಪಂಚಕುಲದ ಗುರುದ್ವಾರ ಹಾಗೂ ಮಾನಸಾ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
* ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಬಿಜೆಪಿ ನಾಯಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಬಿಜೆಪಿ ಆಡಳಿತವಿರುವ ವಿವಿಧ ರಾಜ್ಯಗಳ ಹದಿಮೂರು ಮುಖ್ಯಮಂತ್ರಿಗಳು ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು.
ಸತತ 2ನೇ ಅವಧಿಗೆ ಹರಿಯಾಣ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ
Published by Jyoti Angadi
17 ಅಕ್ಟೋಬರ್ 2024