* ಸಿಂದಗಿ ಸಾರಂಗ ಮಠ ಕೊಡಮಾಡುವ ಭಾಸ್ಕರಾಚಾರ್ಯ ಪ್ರಶಸ್ತಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಾಜಿ ಪ್ರಧಾನ ನಿರ್ದೇಶಕರು ಸುಬ್ಬಯ್ಯ ಅಯ್ಯಪ್ಪನ್ ಆಯ್ಕೆಯಾಗಿದ್ದಾರೆ.
* ವಿಜಯಪುರ ಜಿಲ್ಲೆಯ ಸಿಂದಗಿಯ ಸಾರಂಗಮಠ ಪ್ರತಿ ವರ್ಷ ನೀಡುವ ಖ್ಯಾತ ಖಗೋಳಶಾಸ್ತ್ರಜ್ಞ ಭಾಸ್ಕರಾಚಾರ್ಯ ಅವರ ಹೆಸರಿನ ಮೇಲೆ ಕೊಡ ಮಾಡುವ ಭಾಸ್ಕರ ರಾಷ್ಟ್ರೀಯ ಪ್ರಶಸ್ತಿ ಈ ಬಾರಿ ಅಂತರಾಷ್ಟ್ರೀಯ ಖ್ಯಾತ ಕೃಷಿ ತಜ್ಞ ಡಾ. ಎಸ್. ಅಯ್ಯಪ್ಪನ್ ಅವರಿಗೆ ಲಭಿಸಿದೆ.
* ಈ ಹಿಂದೆ ದೇಶದ ಖ್ಯಾತ ವಿಜ್ಞಾನಿಗಳಾದ ಸಿ.ಎನ್.ರಾವ್, ಯು.ಆರ್.ರಾವ್, ಡಾ. ಎ.ಎಸ್.ಪಾಟೀಲ, ಕೆ.ಕಸ್ತೂರಿರಂಗನ, ಇಸ್ರೋ ಮಾಜಿ ಅಧ್ಯಕ್ಷ ಡಾ.ಕಿರಣಕುಮಾರ ಅವರಿಗೆ ನೀಡಿ ಗೌರವಿಸಿದೆ.
* ಮೈಸೂರು ಮೂಲದ ಪದ್ಮಶ್ರೀ ಪುರಸ್ಕೃತ ಸುಬ್ಬಯ್ಯ ಅಯ್ಯಪ್ಪನ್ ಅವರು 45ಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡಿ ಅಲ್ಲಿನ ಮೀನುಗಾರಿಕೆ ಮತ್ತು ಕೃಷಿ ತಂತ್ರಜ್ಞಾನದ ಕುರಿತು ಅಧ್ಯಯನ ಮಾಡಿದ್ದಾರೆ ಭಾರತ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
* ಸಿದ್ಧಾಂತ ಶಿಖಾಮಣಿ ಕರ್ತೃ ಸಾಲೋಟಗಿ ಶಿವಯೋಗಿ ಶಿವಾಚಾರ್ಯರ ಸ್ಮರಣೆಯಲ್ಲಿ ನೀಡುವ ಶಿವಯೋಗಿ ಶಿವಾಚಾರ್ಯ ಪ್ರಶಸ್ತಿಯನ್ನು ಮಡಕೇರಿಯ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸಿ.ಶಿವಕುಮಾರಸ್ವಾಮಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಸುಬ್ಬಯ್ಯ ಅಯ್ಯಪ್ಪನ ಅವರಿಗೆ ರಾಷ್ಟ್ರೀಯ ಭಾಸ್ಕರಾಚಾರ್ಯ ಪ್ರಶಸ್ತಿ
Published by Jyoti Angadi
08 ಅಕ್ಟೋಬರ್ 2024