* ಕರ್ನಾಟಕ ಹೈಕೋರ್ಟ್ ನಿಕಟ ಪೂರ್ವ ಮುಖ್ಯ ನ್ಯಾಯಮೂರ್ತಿ ಮತ್ತು ಮತ್ತು ಬಾಂಬೇ ಹೈಕೋರ್ಟ್ ನ ನ್ಯಾಯಮೂರ್ತಿಗಳಾಗಿದ್ದ ಪಿ ಬಿ ವರಾಳೆ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಜನವರಿ 25 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
* ಇದರೊಂದಿಗೆ ಸರ್ವೋಚ್ಚ ನ್ಯಾಯಾಲಯದ ಎಲ್ಲಾ ನ್ಯಾಯಮೂರ್ತಿ ಹುದ್ದೆಗಳು ಭರ್ತಿಯಾದಂತಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಸಮಾರಂಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ಅವರು ನ್ಯಾಯಮೂರ್ತಿ ವರಾಳೆ ಅವರಿಗೆ ಪ್ರಮಾಣ ವಚನ ಬೋಧಿಸಿದರು.
* ನ್ಯಾಯಮೂರ್ತಿ. ಪಿ.ಬಿ.ವರಾಳೆ ಅವರಿಗೆ ಪದೋನ್ನತಿ ನೀಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಜನವರಿ 19ರಂದು ಶಿಫಾರಸು ಮಾಡಿತ್ತು.
* ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಸಿ.ಟಿ.ರವಿಕುಮಾರ್ ಅವರಾದ ಬಳಿಕ ದಲಿತ ಸಮುದಾಯದಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದಗೇರಿದ ಮೂರನೇ ಹಾಲಿ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಾಗಿದ್ದಾರೆ.
* 2008ರ ಜುಲೈ 18ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾಯಮೂರ್ತಿ. ವರಾಳೆ ಅವರು ಅಕ್ಟೋಬರ್ 15, 2022ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು.
ಶುಕ್ರವಾರ, 26 ಜನವರಿ 2024
2:42 ಅಪರಾಹ್ನ
Daily PDF
ಸುಪ್ರೀಂ ನ್ಯಾಯಮೂರ್ತಿಯಾಗಿ ಪಿ.ಬಿ. ವರಾಳೆ ಪ್ರಮಾಣ ವಚನ ಸ್ವೀಕಾರ
Authored by:
Bhagya R K