* ದೇಶದಲ್ಲಿ ಸುಪ್ರೀಂ ಕೋರ್ಟ್ ಆರಂಭವಾಗಿ 75 ವರ್ಷ ತುಂಬಿರುವ ಹಿನ್ನಲೆಯಲ್ಲಿ ವಾರ್ಷಿಕೋತ್ಸವದ ನೆನಪಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸರ್ವೋಚ್ಛ ನ್ಯಾಯಾಲಯದ ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು.
* ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ( ಎನ್‌ಐಎಫ್‌ಟಿ) ಕಾಲೇಜಿನಲ್ಲಿ ನಡೆದ ದ್ರೌಪದಿ ಮುರ್ಮು ಅವರು ನ್ಯಾಯ ಮತ್ತು ಪ್ರಜಾಪ್ರಭುತ್ವವನ್ನು ಸಂಕೇತಿಸುವ ಹೊಸ ಧ್ವಜ ಮತ್ತು ಲಾಂಛನವನ್ನು ಬಿಡುಗಡೆ ಮಾಡಲಾಯಿತು.
* ಹೊಸ ಧ್ವಜವು ಅಶೋಕ ಚಕ್ರ, ಸುಪ್ರೀಂಕೋರ್ಟ್ ಕಟ್ಟಡ ಮತ್ತು ಸಂವಿಧಾನವನ್ನು ಒಳಗೊಂಡಿದೆ. ಈ ಸಂದರ್ಭದಲ್ಲಿ ಸಂಸದ ಅರ್ಜುನ್ ಮೇಘವಾಲ್, ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಉಪಸ್ಥಿತರಿದ್ದರು.
* ನಮ್ಮ ನ್ಯಾಯಾಂಗ ವ್ಯವಸ್ಥೆಯ ಮುಂದೆ ಅನೇಕ ಸವಾಲುಗಳಿವೆ. ಅದಕ್ಕಾಗಿ ಎಲ್ಲರೂ ಒಟ್ಟಾಗಿ 2 ಸಂಘಟಿತ ಪ್ರಯತ್ನ ಮಾಡಬೇಕಾಗುತ್ತದೆ. ಉದಾಹರಣೆಗೆ, 2. ಸಾಕ್ಷಿಗಳು ಮತ್ತು ಸಾಕ್ಷಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನ್ಯಾಯಾಗ, ಸರಕಾರ ಮತ್ತು ಪೊಲೀಸರು ಜಂಟಿಯಾಗಿ ಪರಿಹರಿಸಬೇಕು'' ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸುಪ್ರೀಂಕೋರ್ಟ್ ಗೆ ಹೊಸ ಧ್ವಜ, ಲಾಂಛನ ಅನಾವರಣ
Published by Jyoti Angadi
03 ಸೆಪ್ಟೆಂಬರ್ 2024