* ಉತ್ತರಕಾಶಿ ಜಿಲ್ಲೆಯ ಸಿಲ್ಮಾರಾ-ಬಡಕೋಟ್ ಸುರಂಗದಲ್ಲಿ ಸಿಲುಕಿದ್ದ 41 ಜನ ಕಾರ್ಮಿಕರನ್ನು ರಕ್ಷಿಸಲು 17 ದಿನಗಳಿಂದ ನಡೆದಿದ್ದ ಪ್ರಯತ್ನ ಪಡುತ್ತಿದ್ದು, ಕೊನೆಗೂ ಪ್ರಯತ್ನಕ್ಕೆ ಫಲ ಸಿಕ್ಕಂತಾಗಿದೆ.
* ಅಷ್ಟೂ ಮಂದಿ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆದುಕೊಂಡು ಬರುವಲ್ಲಿ ರಕ್ಷಣಾ ಸಿಬ್ಬಂದಿ ಮಂಗಳವಾರ ರಾತ್ರಿ ಯಶಸ್ಸು ಕಂಡರು. ಭಾರತದಲ್ಲಿ ಇಂತಹ ಚಾರಿತ್ರಿಕ ಕಾರ್ಯಾಚರಣೆ ನಡೆದಿದ್ದು ಇದೇ ಮೊದಲು.
* ಸುರಂಗದಲ್ಲಿ ಸಿಲುಕಿರುವ 17 ದಿನಗಳಿಂದ ಹೊರಜಗತ್ತನ್ನೇ ಕಾಣದಿದ್ದ ಕಾರ್ಮಿಕರು ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ.
* ಸುರಂಗದಿಂದ ಸುರಕ್ಷಿತವಾಗಿ ಹೊರಗೆ ಕರೆತರಲು ಅಳವಡಿಸಿದ್ದ 60 ಮೀಟರ್ ಉದ್ದದ ಪೈಪ್ ಮೂಲಕ ಕಾರ್ಮಿಕರು ಹೊರಬರುತ್ತಿದ್ದಂತೆಯೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ಸಚಿವ ವಿ.ಕೆ. ಸಿಂಗ್ ಅವರು, ಕಾರ್ಮಿಕರನ್ನು ಸ್ವಾಗತಿಸಿದರು.
ಗುರುವಾರ, 30 ನವೆಂಬರ್ 2023
10:25 ಪೂರ್ವಾಹ್ನ
Daily PDF
ಸುರಕ್ಷತೆಯಿನ ಹೊರಬಂದ ಸಿಲ್ಮಾರಾ-ಬಡಕೋಟ್ ಸುರಂಗದಲ್ಲಿ ಸಿಲುಕಿದ 41 ಜನ ಕಾರ್ಮಿಕರು
Authored by:
Akshata Halli