* ತಮಿಳುನಾಡು ಸರ್ಕಾರ ನೀಡುವ 2024ನೇ ಸಾಲಿನ ‘ವೈಕಂ ಪ್ರಶಸ್ತಿ’ಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ನೀಡಿ ಗೌರವಿಸಲಾಗಿದೆ. * ಕೇರಳದ ವೈಕಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಹಾಗೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2024 ಡಿಸೆಂಬರ್. 12 (ಗುರುವಾರ) ರಂದು ‘ವೈಕಂ ಪ್ರಶಸ್ತಿ’ಯನ್ನು ಪ್ರದಾನ ಮಾಡಿದರು.* ಈ ಪ್ರಶಸ್ತಿ ಸ್ವೀಕರಿಸಿದ ದೇವನೂರ ಮಹಾದೇವ ಅವರು ತಾವು ಬರೆದಿರುವ ʻಆರ್ಎಸ್ಎಸ್ ಆಳ ಅಗಲʼ ಪುಸ್ತಕದ ಕನ್ನಡ, ಇಂಗ್ಲಿಷ್ ಮತ್ತು ಮಲೆಯಾಳಂ ಅನುವಾದದ ಪ್ರತಿಗಳನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ನೀಡಿದರು.* ವೈಕಂ ಪ್ರಶಸ್ತಿಯು ರೂ. 5 ಲಕ್ಷ ನಗದು ಮತ್ತು ಸ್ವರ್ಣಲೇಪಿತ ಪದಕವನ್ನು ಒಳಗೊಂಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುತ್ತದೆ ಎಂದು ತಮಿಳುನಾಡು ಸರ್ಕಾರದ ತಿಳಿಸಿದೆ.