* ತಮಿಳುನಾಡು ಸರ್ಕಾರ ನೀಡುವ 2024ನೇ ಸಾಲಿನ ‘ವೈಕಂ ಪ್ರಶಸ್ತಿ’ಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ನೀಡಿ ಗೌರವಿಸಲಾಗಿದೆ.
* ಕೇರಳದ ವೈಕಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಹಾಗೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2024 ಡಿಸೆಂಬರ್. 12 (ಗುರುವಾರ) ರಂದು ‘ವೈಕಂ ಪ್ರಶಸ್ತಿ’ಯನ್ನು ಪ್ರದಾನ ಮಾಡಿದರು.
* ಈ ಪ್ರಶಸ್ತಿ ಸ್ವೀಕರಿಸಿದ ದೇವನೂರ ಮಹಾದೇವ ಅವರು ತಾವು ಬರೆದಿರುವ ʻಆರ್‌ಎಸ್‌ಎಸ್ ಆಳ ಅಗಲʼ ಪುಸ್ತಕದ ಕನ್ನಡ, ಇಂಗ್ಲಿಷ್ ಮತ್ತು ಮಲೆಯಾಳಂ ಅನುವಾದದ ಪ್ರತಿಗಳನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ನೀಡಿದರು.
* ವೈಕಂ ಪ್ರಶಸ್ತಿಯು ರೂ. 5 ಲಕ್ಷ ನಗದು ಮತ್ತು ಸ್ವರ್ಣಲೇಪಿತ ಪದಕವನ್ನು ಒಳಗೊಂಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುತ್ತದೆ ಎಂದು ತಮಿಳುನಾಡು ಸರ್ಕಾರದ ತಿಳಿಸಿದೆ.
ತಮಿಳನಾಡು ಸರ್ಕಾರ ನೀಡುವ 2024ನೇ ಸಾಲಿನ ವೈಕಂ ಪ್ರಶಸ್ತಿಗೆ ದೇವನೂರು ಮಹಾದೇವ ಆಯ್ಕೆ
Published by Bhagya R K
13 ಡಿಸೆಂಬರ್ 2024