* ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟ ಮಾಡಿರುವ ನೂತನ ಟಿ20 ಶ್ರೇಯಾಂಕ ಪಟ್ಟಿಯನ್ನು (ICC T20I Rankings) ಪ್ರಕಟಿಸಿದೆ.
* ಟಿ20 ವಿಶ್ವಕಪ್ನಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಮಿಂಚುವ ಮೂಲಕ ತಂಡ ಚಾಂಪಿಯನ್ ಆಗಲು ಪ್ರಮುಖ ಪಾತ್ರವಹಿಸಿದ್ದ ಹಾರ್ದಿಕ್ ಪಾಂಡ್ಯ ಅವರು ಆಲ್‌ರೌಂಡರ್ ಶ್ರೇಯಾಂಕದಲ್ಲಿ ನಂ.1 ಸ್ಥಾನ ಪಡೆದುಕೊಂಡಿದ್ದಾರೆ.
* ಈ ಬಾರಿ ಟಿ20 ಬ್ಯಾಟರ್ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಅಗ್ರಸ್ಥಾನ ಅಲಂಕರಿಸಿದರೆ, ಬೌಲರ್ಗಳ ಪಟ್ಟಿಯಲ್ಲಿ ಇಂಗ್ಲೆಂಡ್ನ ಆದಿಲ್ ರಶೀದ್ ಮೊದಲ ಸ್ಥಾನದಲ್ಲಿದ್ದಾರೆ.
* ಶ್ರೀಲಂಕಾ ಟಿ20-ಐ ತಂಡದ ನಾಯಕ ವಾನಿಂದು ಹಸರಂಗ ಜೊತೆಗೆ ನಂ.1 ಆಲ್‌ರೌಂಡರ್ ಸ್ಥಾನವನ್ನು ಹಾರ್ದಿಕ್ ಹಂಚಿಕೊಂಡಿದ್ದಾರೆ.
* ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 17ನೇ ಓವರ್ ಬೌಲ್ ಮಾಡಿದ್ದ ಹಾರ್ದಿಕ್, 27 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 2 ಬೌಂಡರಿಗಳ ನೆರವಿನಿಂದ 52 ರನ್ ಗಳಿಸಿದ್ದ ಸ್ಫೋಟಕ ಬ್ಯಾಟ್ಸಮನ್ ಹೆನ್ರಿಕ್ ಕ್ಲಾಸೆನ್ ವಿಕೆಟ್ ಪಡೆದು ಪಂದ್ಯದ ದಿಕ್ಕನ್ನೇ ಬಸಲಿಸಿದ್ದರು.
* ಫೈನಲ್ ಪಂದ್ಯದ ನಿರ್ಣಾಯಕ ಹಂತದಲ್ಲಿ ದಕ್ಷಿಣ ಆಫ್ರಿಕಾದ ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ವಿಕೆಟ್‌ಗಳನ್ನು ಗಳಿಸಿದ್ದ ಹಾರ್ದಿಕ್ ಪಂದ್ಯದ ಜಯಕ್ಕೆ ಕಾರಣರಾಗಿದ್ದರು.
* ಭಾರತದ ಎಡಗೈ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರು ಏಳು ಸ್ಥಾನಗಳ ಬಡ್ತಿಯೊಂದಿಗೆ 12ನೇ ಸ್ಥಾನಕ್ಕೆ ಜಿಗಿದಿದ್ದಾರೆ.
* ಬೌಲಿಂಗ್ ವಿಭಾಗದಲ್ಲಿ ಜಸಪ್ರೀತ್ ಬೂಮ್ರಾ ಅವರು 12ನೇ ಸ್ಥಾನಕ್ಕೆ ಏರಿದ್ದಾರೆ. ಅವರು 2020ರ ನಂತರ ಮಾಡಿದ ಉತ್ತಮ ಸಾಧನೆ ಇದಾಗಿದೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅವರು 15 ವಿಕೆಟ್‌ಗಳನ್ನು ಗಳಿಸಿದ್ದರು.
* ಟಿ20 ಬ್ಯಾಟರ್ಗಳ ಟಾಪ್-10 ಪಟ್ಟಿ:
ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)- 844 ರೇಟಿಂಗ್
ಸೂರ್ಯಕುಮಾರ್ ಯಾದವ್ (ಭಾರತ)- 838 ರೇಟಿಂಗ್
ಫಿಲ್ ಸಾಲ್ಟ್ (ಇಂಗ್ಲೆಂಡ್)- 797 ರೇಟಿಂಗ್
ಬಾಬರ್ ಆಝಂ (ಪಾಕಿಸ್ತಾನ್)- 755 ರೇಟಿಂಗ್
ಮೊಹಮ್ಮದ್ ರಿಝ್ವಾನ್ (ಪಾಕಿಸ್ತಾನ್)- 746 ರೇಟಿಂಗ್
ಜೋಸ್ ಬಟ್ಲರ್ (ಇಂಗ್ಲೆಂಡ್)- 746 ರೇಟಿಂಗ್
ಯಶಸ್ಸಿ ಜೈಸ್ವಾಲ್ (ಭಾರತ)- 659 ರೇಟಿಂಗ್
ಬ್ರಾಂಡನ್ ಕಿಂಗ್ (ವೆಸ್ಟ್ ಇಂಡೀಸ್)- 656 ರೇಟಿಂಗ್
ಜಾನ್ಸನ್ ಚಾರ್ಲ್ಸ್ (ವೆಸ್ಟ್ ಇಂಡೀಸ್)- 655 ರೇಟಿಂಗ್
ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ)- 646 ರೇಟಿಂಗ್
* ಟಿ20 ಬೌಲರ್ಗಳ ಟಾಪ್-10 ಪಟ್ಟಿ:
ಆದಿಲ್ ರಶೀದ್ (ಇಂಗ್ಲೆಂಡ್)- 718 ರೇಟಿಂಗ್
ಅನ್ರಿಕ್ ನೋಕಿಯಾ (ಸೌತ್ ಆಫ್ರಿಕಾ)- 675 ರೇಟಿಂಗ್
ವನಿಂದು ಹಸರಂಗ (ಶ್ರೀಲಂಕಾ)- 674 ರೇಟಿಂಗ್
ರಶೀದ್ ಖಾನ್ (ಅಫ್ಘಾನಿಸ್ತಾನ್)- 668 ರೇಟಿಂಗ್
ಜೋಶ್ ಹ್ಯಾಝಲ್ವುಡ್ (ಆಸ್ಟ್ರೇಲಿಯಾ)- 662 ರೇಟಿಂಗ್
ಅಕೀಲ್ ಹೊಸೈನ್ (ವೆಸ್ಟ್ ಇಂಡೀಸ್)- 659 ರೇಟಿಂಗ್
ಅಕ್ಷರ್ ಪಟೇಲ್ (ಭಾರತ)- 657 ರೇಟಿಂಗ್
ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 654 ರೇಟಿಂಗ್
ಕುಲ್ದೀಪ್ ಯಾದವ್ (ಭಾರತ)- 654 ರೇಟಿಂಗ್
ಫಝಲ್ಹಕ್ ಫಾರೂಖಿ (ಅಫ್ಘಾನಿಸ್ತಾನ್)- 645 ರೇಟಿಂಗ್
* ಟಿ20 ಆಲ್ರೌಂಡರ್ಗಳ ಟಾಪ್-10 ಪಟ್ಟಿ:
ಹಾರ್ದಿಕ್ ಪಾಂಡ್ಯ (ಭಾರತ)- 222 ರೇಟಿಂಗ್
ವನಿಂದು ಹಸರಂಗ (ಶ್ರೀಲಂಕಾ)- 222 ರೇಟಿಂಗ್
ಮಾರ್ಕಸ್ ಸ್ಟೋಯಿನಿಸ್ (ಆಸ್ಟ್ರೇಲಿಯಾ)- 211 ರೇಟಿಂಗ್
ಸಿಕಂದರ್ ರಾಝ (ಝಿಂಬಾಬ್ವೆ)- 210 ರೇಟಿಂಗ್
ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)- 206 ರೇಟಿಂಗ್
ಮೊಹಮ್ಮದ್ ನಬಿ (ಅಫ್ಘಾನಿಸ್ತಾನ್)- 205 ರೇಟಿಂಗ್
ದೀಪೇಂದ್ರ ಸಿಂಗ್ ಅರೀ (ನೇಪಾಳ)- 199 ರೇಟಿಂಗ್
ಲಿಯಾಮ್ ಲಿವಿಂಗ್ಸ್ಟೋನ್ (ಇಂಗ್ಲೆಂಡ್)- 187 ರೇಟಿಂಗ್
ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ)- 186 ರೇಟಿಂಗ್
ಮೊಯೀನ್ ಅಲಿ (ಇಂಗ್ಲೆಂಡ್)- 174 ರೇಟಿಂಗ್
ಗುರುವಾರ, 04 ಜುಲೈ 2024
10:58 ಪೂರ್ವಾಹ್ನ
Daily PDF
ಟಿ20 ರ್ಯಾಂಕಿಂಗ್ ಪ್ರಕಟ : ಅಗ್ರಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ
Authored by:
Bhagya R K