* ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ ಜೂನ್ 1 ರಿಂದ ಆರಂಭವಾಗಲಿರುವ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ(KMF) ಕೆಲವು ತಂಡದ ಪ್ರಾಯೋಜಕತ್ವ ಪಡೆಯುವ ಗುರಿ ಇಟ್ಟುಕೊಂಡಿದೆ. ಈ ಋತುವಿನಲ್ಲಿ 20 ತಂಡಗಳು ಆಡಲಿವೆ.
* ಅಮೂಲ್(Amul) ಸಂಸ್ಥೆಯು 2011ರಿಂದಲೂ ಅಫಫ್ಘಾನಿಸ್ತಾನ, ನ್ಯೂಜಿಲ್ಯಾಂಡ್ , ದಕ್ಷಿಣ ಆಫ್ರಿಕಾ, ಶ್ರೀಲಂಕಾ ಸೇರಿದಂತೆ ಕೆಲ ತಂಡಗಳ ಪ್ರಾಯೋಜತ್ವಗಳನ್ನು ಪಡೆದಿದೆ.
* ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಹಾಕಲು ಕೆಎಂಎಫ್ ಮುಂದಾಗಿದೆ.
* ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ.
* ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.
ಶುಕ್ರವಾರ, 22 ಮಾರ್ಚ್ 2024
9:08 ಪೂರ್ವಾಹ್ನ
Daily PDF
ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಂದಿನಿ ಪ್ರಾಯೋಜಕತ್ವ
Authored by:
Yallamma G