* ಕಣ್ಣಿನ ಸಮಸ್ಯೆ ಇರುವವರಿಗೆ ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕಣ್ಣಿನ ಸಮಸ್ಯೆ ಇರುವವರಿಗೆ ಉಚಿತ ಚಿಕಿತ್ಸೆ ನೀಡುವ ಆಶಾಕಿರಣ ಯೋಜನೆಗೆ ಹಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
* ಫೆಬ್ರುವರಿ 18 ರಂದು ಹಾವೇರಿ ನಗರದ ಕೊಳ್ಳಿ ಕಾಲೇಜು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಶಾಕಿರಣ ಯೋಜನೆಯಡಿ ಸಿದ್ದರಾಮಯ್ಯ ಅವರು ನೇತ್ರ ಸಮಸ್ಯೆವುಳ್ಳ ಮಕ್ಕಳಿಗೆ ಕನ್ನಡಕ ವಿತರಿಸಿದರು.
* ಹಾವೇರಿ ಜಿಲ್ಲೆಗೆ 1400 ಕೋಟಿ ರೂಪಾಯಿ ಹಣ ಗ್ಯಾರಂಟಿ ಯೋಜನೆಗಳಿಗೆ ಕೊಟ್ಟಿದ್ದೇವೆ. ಇದೊಂದೇ ಜಿಲ್ಲೆಗೆ 1400 ಕೋಟಿ ಹಣ ಕೊಟ್ಟಿದ್ದೇವೆ. ಬಜೆಟ್ನಲ್ಲಿ 52000 ಕೋಟಿ ರೂಪಾಯಿ ಹಣ ಗ್ಯಾರಂಟಿಗಾಗಿ ಘೋಷಣೆ ಮಾಡಿದ್ದೇವೆ ಎಂದರು.
* ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಚಾಮರಾಜನಗರ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಈ ಯೋಜನೆ ಜಾರಿ ಮಾಡುತ್ತಿದ್ದೇವೆ.
* ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಆಶಾಕಿರಣ ಅಭಿಯಾನ ಆರಂಭವಾಗುತ್ತದೆ. ಮುಂದೆ ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಈ ಯೋಜನೆ ವಿಸ್ತರಣೆ ಆಗಲಿದೆ ಎಂದು ಹೇಳಿದ್ದರು.
* ಸರ್ಕಾರಿ ಆಸ್ಪತ್ರೆಗಳು ಮತ್ತು ನೋಂದಾಯಿತ ಸ್ವಯಂಸೇವಾ ಸಂಸ್ಥೆಗಳ ಆಸ್ಪತ್ರೆಗಳಲ್ಲಿ ಕಣ್ಣಿನ ಪೊರೆ ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ
Published by Bhagya R K
19 ಫೆಬ್ರವರಿ 2024