* ಉತ್ತರಾಖಂಡ ಸರಕಾರವು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿತ್ತು. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು 192 ಪುಟಗಳ ವಿಧೇಯಕವನ್ನು ಮಾಡಿಸಲಾಯಿತು.
* ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಮೂಲಕ ಉತ್ತರಾಖಂಡ ಭಾರತದ ಶಾಸಕಾಂಗ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ.
* ಮಸೂದೆ ಕುರಿತು ಮಾತನಾಡಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, " ಮದುವೆ, ಜೀವನಾಂಶ, ಉತ್ತರಾಧಿಕಾರ ಮತ್ತು ವಿಚ್ಛೇದನದಂತಹ ವಿಷಯಗಳಲ್ಲಿ ಯಾವುದೇ ತಾರತಮ್ಯವಿಲ್ಲದೆ ಯುಸಿಸಿ ಎಲ್ಲರಿಗೂ ಸಮಾನತೆಯ ಹಕ್ಕನ್ನು ನೀಡುತ್ತದೆ ಎಂದು ಹೇಳಿದರು.
* ಮುಖ್ಯವಾಗಿ ಮಹಿಳೆಯರ ವಿರುದ್ಧದ ತಾರತಮ್ಯವನ್ನು ತೆಗೆದುಹಾಕುತ್ತದೆ. ಮಹಿಳೆಯರ ವಿರುದ್ಧ ಅನ್ಯಾಯ ಮತ್ತು ತಪ್ಪು ಕಾರ್ಯಗಳನ್ನು ನಿರ್ಮೂಲನೆ ಮಾಡಲು ಸಹಾಯ ಮಾಡುತ್ತದೆ. ‘ಮಾತೃಶಕ್ತಿ’ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವ ಸಮಯ ಬಂದಿದೆ. ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಮೇಲಿನ ತಾರತಮ್ಯ ನಿಲ್ಲಬೇಕು ಎಂದರು."
ಗುರುವಾರ, 08 ಫೆಬ್ರುವರಿ 2024
4:16 ಅಪರಾಹ್ನ
Daily PDF
ಉತ್ತರಾಖಂಡ : ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆ ಅಂಗೀಕಾರ
Authored by:
Yallamma G