* ಉತ್ತರಾಖಂಡದಲ್ಲಿ ಜನವರಿ 27ರಿಂದ ಏಕರೂಪ ನಾಗರೀಕ ಸಂಹಿತೆ ಅಧಿಕೃತವಾಗಿ ಜಾರಿಯಾಗಿದೆ. ಈ ಮೂಲಕ UCC ಜಾರಿಗೊಳಿಸಿದ ಮೊದಲ ರಾಜ್ಯ ಉತ್ತರಾಖಂಡ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.* ಮದುವೆ, ವಿಚ್ಛೇದನ, ಉತ್ತರಾಧಿಕಾರ, ದತ್ತು ಇತ್ಯಾದಿ ವಿಷಯಗಳಲ್ಲಿ ಎಲ್ಲಾ ಧಾರ್ಮಿಕ ಸಮುದಾಯಗಳಿಗೆ ಒಂದೇ ಕಾನೂನನ್ನು ಏಕರೂಪ ನಾಗರಿಕ ಸಂಹಿತೆಯನ್ನು (UCC) ಉಲ್ಲೇಖಿಸುತ್ತದೆ.* ಸೋಮವಾರ (ಜನವರಿ 27) ನಡೆದ ಕಾರ್ಯಕ್ರಮದಲ್ಲಿ ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಏಕರೂಪ ನಾಗರಿಕ ಸಂಹಿತೆಗೆ ಸಿದ್ದ ಪಡಿಸಲಾಗಿರುವ ಪೋರ್ಟಲ್ ಮತ್ತು ನಿಯಮ ಹಾಗೂ ಗೆಜೆಟ್ ಅಧಿಸೂಚನೆಯನ್ನು ಬಿಡುಗಡೆ ಮಾಡಿದರು.* "ಎಲ್ಲಾ ಧರ್ಮಗಳ ಪ್ರತಿಯೊಬ್ಬ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಒಳಗೊಂಡ ಯುಸಿಸಿ ಈ ಕ್ಷಣದಿಂದ ಸಂಪೂರ್ಣವಾಗಿ ಜಾರಿಗೆ ಬಂದಿದೆ. ಅದರ ಕೀರ್ತಿ ಸಂಪೂರ್ಣವಾಗಿ ರಾಜ್ಯದ ಜನರಿಗೆ ಸಲ್ಲುತ್ತದೆ" ಎಂದು ಪುಷ್ಕರ್ ಸಿಂಗ್ ಧಾಮಿ ಅವರು ಹೇಳಿದ್ದಾರೆ.* "ಎಲ್ಲಾ ಧರ್ಮಗಳ ಪ್ರತಿಯೊಬ್ಬ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಒಳಗೊಂಡ UCC ಈ ಕ್ಷಣದಿಂದ ಸಂಪೂರ್ಣವಾಗಿ ಜಾರಿಗೆ ಬಂದಿದೆ. ಅದರ ಕೀರ್ತಿ ಸಂಪೂರ್ಣವಾಗಿ ರಾಜ್ಯದ ಜನರಿಗೆ ಸಲ್ಲುತ್ತದೆ" ಎಂದು ಧಾಮಿ ತಮ್ಮ ಗೃಹ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಹೇಳಿದರು.* ಸ್ವಾತಂತ್ರ್ಯದ ನಂತರ ಯುಸಿಸಿಯನ್ನು (UCC) ಅಳವಡಿಸಿಕೊಂಡ ದೇಶದ ಮೊದಲ ರಾಜ್ಯ ಉತ್ತರಾಖಂಡ ಈ ಕಾನೂನು ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಖಾತ್ರಿಪಡಿಸುವ ಮೂಲಕ ಸಮಾಜದಲ್ಲಿ ಏಕರೂಪತೆಯನ್ನು ತರುತ್ತದೆ ಎಂದರು.* 2022ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಧಾಮಿ ರಾಜ್ಯದ ಜನರಿಗೆ ನೀಡಿದ ಪ್ರಮುಖ ಚುನಾವಣಾ ಪೂರ್ವ ಭರವಸೆಗಳಲ್ಲಿ ಯುಸಿಸಿ ಜಾರಿ ಸಹ ಒಂದಾಗಿದೆ.