* ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಉದ್ದೇಶಿತ ವಿಧಾನ ಮಂಡಲದ ಚಳಿಗಾಲ ಅಧಿವೇಶನ ಒಂದು ದಿನ ಮೊಟಕುಗೊಂಡಿದೆ.
* ಡಿ.9 ರಿಂದ 20ರವರೆಗೆ ನಿಗದಿಯಾಗಿದ್ದ ಅಧಿವೇಶನ 19ರವರೆಗೆ ಮಾತ್ರ ನಡೆಯಲಿದೆ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
* ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ವಂದು ದಿನ ಮೊಟಕುಗೊಳಿಸಲಾಗಿದೆ.
* ಸಾಹಿತ್ಯ ಸಮ್ಮೇಳನ ಡಿಸೆಂಬರ್ 20 ರಿಂದ 22ರವರೆಗೆ ನಡೆಯಲಿದೆ. ಮುಖ್ಯಮಂತ್ರಿ ಮತ್ತು ಸಚಿವರು ಅದರಲ್ಲಿ ಪಾಲ್ಗೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
* ವಕ್ಫ್ ಮಂಡಳಿ ವಿವಾದ, ಮುಡಾ ನಿವೇಶನಗಳ ಹಂಚಿಕೆ ಅಕ್ರಮ, ಅಬಕಾರಿ ಕಮಿಷನ್ ವಸೂಲಿ, ವರ್ಗಾವಣೆ ದಂಧೆಗೆ ಅಧಿಕಾರಿಯೊಬ್ಬ ಆತ್ಮಹತ್ಯೆ ಅಭಿವೃದ್ಧಿ ಕೆಲಸಗಳು ಸ್ಥಗಿತ ಮುಂತಾದ ವಿಷಯ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವ ನಿರೀಕ್ಷೆಯಿದೆ.
* ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ, ಅಭಿವೃದ್ಧಿ ಸೇರಿ ಪ್ರಮುಖ ಯೋಜನೆಗಳ ಚರ್ಚೆ, ಪರಿಹಾರಕ್ಕೆ ವೇದಿಕೆಯಾಗಬೇಕು. ರಾಜಕೀಯ ಮೇಲಾಟ, ಕೆಸರೆರಚಾಟ ಕಡಿಮೆಯಾಗಬೇಕು ಎಂದು ಉತ್ತರ ಕರ್ನಾಟಕದ ಜನರು ನಿರೀಕ್ಷಿಸಿದ್ದಾರೆ.
ವಿಧಾನ ಮಂಡಲ ಅಧಿವೇಶನ ಒಂದು ದಿನ ಮೊಟಕು
Published by Jyoti Angadi
29 ನವೆಂಬರ್ 2024