*  16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರದಿಂದ (ಮೇ 22) ರಂದು ವಿಧಾನಸೌಧದಲ್ಲಿರುವ ವಿಧಾನಸಭೆ ಸಭಾಂಗಣದಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಹಂಗಾಮಿ ಸ್ಪೀಕರ್ ಆಗಿ ಕಾಂಗ್ರೆಸ್​ನ  ಆರ್.ವಿ ದೇಶಪಾಂಡೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
* ವಿಧಾನಸಭೆಯ ಸದನದಿಂದ ಸಭಾಧ್ಯಕ್ಷರು ಆಯ್ಕೆಯಾಗುವರೆಗೆ ವಿದಾನಸಭಾಧ್ಯಕ್ಷರ ಕರ್ತವ್ಯವನ್ನು ನಿರ್ವಹಿಸಲು ಆರ್.ವಿ.ದೇಶಪಾಂಡೆ ರವರನ್ನು ಮೇ 22ರಿಂದ ಜಾರಿಗೆ ಬರುವಂತೆ ರಾಜ್ಯಪಾಲರು ನೇಮಕ ಮಾಡಿದ್ದಾರೆ ಎಂದು ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ರವರು ತಿಳಿಸಿದ್ದಾರೆ.