* ಸೆಪ್ಟೆಂಬರ್ ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 24 ರಿಂದ 30ರವರೆಗೆ ವಿಶ್ವಸಂಸ್ಥೆಯ 79ನೇ ಸಾಮಾನ್ಯ ಸಭೆ ನಡೆಯಲಿದೆ.
* ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿರುವ ನಾಯಕರ ಪಟ್ಟಿ ಹಾಗೂ ಸಭೆಯ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ ಸೆಪ್ಟೆಂಬರ್ 26ರಂದು ಅಧಿವೇಶನ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ. ಅದೇ ದಿನ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್, ನೇಪಾಳದ ನೂತನ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಮಾತನಾಡಲಿದ್ದಾರೆ.
* ಅಂತಾರಾಷ್ಟ್ರೀಯ ನೀತಿಗಳು, ಸುಸ್ಥಿರ ಅಭಿವೃದ್ಧಿ, ಜಾಗತಿಕ ಸಂಗತಿಗಳು, ಇಂಧನ, ಆಹಾರ, ಆರ್ಥಿಕ ಭದ್ರತೆ ವಿಚಾರಗಳು, ಗಡಿ ಸಮಸ್ಯೆ, ಸಂಘರ್ಷಗಳು, ಹವಾಮಾನ ಬದಲಾವಣೆ ಇಂತಹ ಮೊದಲಾದ ವಿಷಯಗಳ ಕುರಿತು ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಯಲಿದೆ.
* ಪ್ರಧಾನಿ ಮೋದಿ ಅವರು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಒಟ್ಟಾರೆಯಾಗಿ ಐದನೇ ಬಾರಿಗೆ ವಿಶ್ವಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.
ಗುರುವಾರ, 18 ಜುಲೈ 2024
12:30 ಅಪರಾಹ್ನ
Daily PDF
ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಮೋದಿ ಭಾಗಿ
Authored by:
Jyoti Angadi