* ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷರಾಗಿ ಮಾಜಿ ರಕ್ಷಣಾ ಕಾರ್ಯದರ್ಶಿ ಡಾ. ಅಜಯ್ ಕುಮಾರ್ ಅವರನ್ನು ಸರ್ಕಾರ ಮೇ 13 ರಂದು (ಮಂಗಳವಾರ) ನೇಮಕ ಮಾಡಿದೆ. ಕೇಂದ್ರ ಸಿಬ್ಬಂದಿ ಸಚಿವಾಲಯ ಈ ಕುರಿತ ಆದೇಶ ಹೊರಡಿಸಿದೆ.
* ಮಾಜಿ ಅಧ್ಯಕ್ಷೆ ಪ್ರೀತಿ ಸುಡಾನ್ ಅವರು ಏಪ್ರಿಲ್ 29 ರಂದು ನಿವೃತ್ತರಾದ ಕಾರಣ ತೆರವಾದ ಕೇಂದ್ರ ಲೋಕಸೇವಾ ಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷರ ಹುದ್ದೆಯನ್ನು ಭರ್ತಿ ಮಾಡಲಾಗಿದೆ.
* "ಭಾರತದ ಸಂವಿಧಾನದ 316 (1) ನೇ ವಿಧಿಯ ಅಡಿಯಲ್ಲಿ ಡಾ. ಅಜಯ್ ಕುಮಾರ್ ಅವರನ್ನು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷರನ್ನಾಗಿ ನೇಮಿಸಲು ರಾಷ್ಟ್ರಪತಿಗಳು ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ.
* ಡಾ. ಅಜಯ್ ಕುಮಾರ್ ಅವರ ಅಧಿಕಾರಾವಧಿಯು ಅವರು ಯುಪಿಎಸ್‌ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಪ್ರಾರಂಭವಾಗುತ್ತದೆ" ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
* 1985ನೇ ತಂಡದ ಕೇರಳ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದ ಅಜಯ್ ಕುಮಾರ್ ಅವರು 2019ರ ಆಗಸ್ಟ್ 23ರಿಂದ 2022ರ ಅಕ್ಟೋಬರ್ 31ರವರೆಗೂ ರಕ್ಷಣಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
* ಪ್ರಸ್ತುತ ಕೇಂದ್ರ ಲೋಕಸೇವಾ ಆಯೋಗದಲ್ಲಿ (ಯುಪಿಎಸ್‌ಸಿ) ಇಬ್ಬರು ಸದಸ್ಯರ ಸ್ಥಾನಗಳು ಖಾಲಿ ಇವೆ. ಯುಪಿಎಸ್‌ಸಿ ಅಧಿಕಾರ ಅವಧಿಯು ಆರು ವರ್ಷ ಕಾಲ ಅಥವಾ 65 ವರ್ಷ ಆಗುವವರೆಗೂ ಇರುತ್ತದೆ.
* ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಹಳೆಯ ವಿದ್ಯಾರ್ಥಿಯಾಗಿರುವ ಕುಮಾರ್, ಮಿನ್ನೇಸೋಟ ವಿಶ್ವವಿದ್ಯಾಲಯದ ಕಾರ್ಲ್ಸನ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನಿಂದ ವ್ಯವಹಾರ ಆಡಳಿತದಲ್ಲಿ ಪಿಎಚ್‌ಡಿ ಪದವಿ ಪಡೆದರು.
* ಐಐಟಿ ಕಾನ್ಪುರ್ ಸೈಟ್‌ನಲ್ಲಿರುವ ಅವರ ಪ್ರೊಫೈಲ್ ಪ್ರಕಾರ, "ರಕ್ಷಣಾ ಸಚಿವಾಲಯಕ್ಕೆ ಸೇರುವ ಮೊದಲು, ಡಾ. ಕುಮಾರ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ವಲಯದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಯುಪಿಎಸ್‌ಸಿ ಅಧ್ಯಕ್ಷರಾಗಿ ಮಾಜಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ನೇಮಕ
Published by Bhagya R K
15 ಮೇ 2025