* ಕನ್ನಡ ಸಾಹಿತ್ಯ ಪರಿಷತ್ತಿನಿಂದ ನೀಡಲಾಗುವ 2024 ನೇ ಸಾಲಿನ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ.
* ಈ ಪ್ರಶಸ್ತಿಯು 25 ಸಾವಿರ ನಗದು ಹಾಗೂ ಫಲಕವನ್ನು ಹೊಂದಿದೆ.
* ರಾಜ್ಯದ ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರು, ಕಲೆ ಪರಂಪರೆಗಳ ಪೋಷಕರಾಗಿ ಮಹತ್ವದ ಕೊಡುಗೆ ನೀಡಿದ ಗಣ್ಯರು ಇಲ್ಲವೆ ಸಂಘ ಸಂಸ್ಥೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದೆ.
* 2024ನೇ ಸಾಲಿನ ಪುರಸ್ಕಾರಕ್ಕೆ ಯು.ಟಿ.ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರು ತಿಳಿಸಿದ್ದಾರೆ.
* ಯು.ಟಿ. ಖಾದರ್ ಅವರು ಕರ್ನಾಟಕದ ಸಾಂಸ್ಕೃತಿಕ ಲೋಕಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಹಿಂದೆ ಆರೋಗ್ಯ ಹಾಗೂ ವಸತಿ ಸಚಿವರಾಗಿ ಕಾರ್ಯ ನಿರ್ವಹಿಸುವಾಗಲೂ ಜನಪರ ಚಿಂತನೆಗಳನ್ನು ಹೊಂದಿದ್ದಾರೆ.
ಗುರುವಾರ, 20 ಮಾರ್ಚ್ 2025
10:52 ಪೂರ್ವಾಹ್ನ
Daily PDF
ಯು.ಟಿ ಖಾದರ್ ಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ
Authored by:
Bhagya R K