Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Yallamma G | Date:Feb. 19, 2025
Image not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಬಯೋ-ಡಿಫೆನ್ಸ್ ಟೆಕ್ನಾಲಜೀಸ್ (DIBT)ನಲ್ಲಿ ಖಾಲಿ ಇರುವ 18 ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ವಿದ್ಯಾರ್ಹತೆ :
DRDO DIBT ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಪದವಿ, ಸ್ನಾತಕೋತ್ತರ ಪದವಿ, BE/ B.Tech, ME/ M.Tech ಪೂರ್ಣಗೊಳಿಸಿರಬೇಕು.


ವಯೋಮಿತಿ :ಅಭ್ಯರ್ಥಿಯು ಗರಿಷ್ಠ ವಯಸ್ಸು 28 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
SC, ST ಅಭ್ಯರ್ಥಿಗಳು: 5 ವರ್ಷಗಳು


ಅರ್ಜಿಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ವೇತನ ಶ್ರೇಣಿ : ಮಾಸಿಕ ₹37,000/- ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ : ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್‌‌‌ https://drdo.gov.in/drdo/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ DRDO DIBT ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ  ಜೂನಿಯರ್ ರಿಸರ್ಚ್ ಫೆಲೋಶಿಪ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ. ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ‌‌ ‌ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌


ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ‌‌ ‌ ‌ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌
ವಿಳಾಸ:
Centre Head, Defence Institute Of Bio-Defence Technologies (DIBT),
Siddhartha Nagar, Mysuru-570011


ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17-02-2025
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-03-2025

Comments