Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:Feb. 14, 2025
Image not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಇಲ್ಲಿ ಖಾಲಿ ಇರುವ 6 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ನೇಮಕ ಮಾಡಲು ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 6
ಜೂನಿಯರ್ ರಿಸರ್ಚ್ ಫೆಲೋ
ಏರೊನಾಟಿಕಲ್ ಇಂಜಿನಿಯರ್ : 2
ಮೆಕ್ಯಾನಿಕಲ್ ಇಂಜಿನಿಯರ್ : 1
ಕಂಪ್ಯೂಟರ್ ಸೈನ್ಸ್ ಇಂಜಿನಿಯರ್ :  2
ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ ಇಂಜಿನಿಯರ್ : 1 


ವಿದ್ಯಾರ್ಹತೆ:
DRDO ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE/ B.Tech , ME/ M.Tech ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.


ವಯೋಮಿತಿ :ಅಭ್ಯರ್ಥಿಗಳು ಗರಿಷ್ಠ ವಯಸ್ಸು 28 ವರ್ಷಗಳನ್ನು ಮೀರಿರಬಾರದು. 


ಅರ್ಜಿಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ವೇತನ ಶ್ರೇಣಿ: ಮಾಸಿಕ ₹37,000/ ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ:ಸ್ಕ್ರೀನಿಂಗ್ ಟೆಸ್ಟ್ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್‌‌‌ https://drdo.gov.in/drdo/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ DRDO ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ  ಜೂನಿಯರ್ ರಿಸರ್ಚ್ ಫೆಲೋ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ. ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ‌‌ ‌ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌


ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ‌‌ ‌ ‌ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌
ಇ ಮೇಲ್ ವಿಳಾಸ:
anjanaur.ade@gov.in 


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 19/03/2025 ರಿಂದ 20/03/2025 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳ ಒಂದು ಪ್ರತಿ ಜೆರಾಕ್ಸ್ ನೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 12-02-2025
ಇ-ಮೇಲ್ ಅರ್ಜಿ ಕಳುಹಿಸಲು ಕೊನೆಯ ದಿನಾಂಕ: 12-03-2025 
ಸಂದರ್ಶನ ನಡೆಯುವ ದಿನಾಂಕ : 19/03/2025 ರಿಂದ 20/03/2025

Comments