Loading..!

ಸಮಾಜ ಕಲ್ಯಾಣ ಇಲಾಖೆಯಿಂದ IAS ಉಚಿತ ತರಬೇತಿಗೆ ಸಂಬಂಧಿಸಿದ ಆಯ್ಕೆಪಟ್ಟಿ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:Feb. 12, 2025
Image not found

2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಬೆಂಗಳೂರು ಇಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಪೂರ್ವಭಾವಿ ತರಬೇತಿ ನೀಡಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನೂ ಆಹ್ವಾನಿಸಲಾಗಿತ್ತು.


               ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 2025 ಜನವರಿ 12 ರಂದು ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಸಮಾಜ ಕಲ್ಯಾಣ ಇಲಾಖೆಯು Free Coaching (FC) ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ ಆಯ್ಕೆಪಟ್ಟಿ ಪ್ರಕಟಿಸಿದೆ. 


* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments