Loading..!

ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಾಸ್ತಾವಿತ ವೇಳಾಪಟ್ಟಿ ಕರ್ನಾಟಕ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರಕಟ
| Date:Jan. 5, 2019
Image not found
ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಾಸ್ತಾವಿತ ವೇಳಾಪಟ್ಟಿ ಇದೀಗ ಪ್ರಕಟಗೊಂಡಿದ್ದು, 2019 ರಂದು ಮಾರ್ಚ್ ನಲ್ಲಿ ಈ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ದ್ವಿತೀಯ ಪಿಯು ಪರೀಕ್ಷೆ 2019 ಪ್ರಸ್ತಾವಿತ ವೇಳಾಪಟ್ಟಿ ಪ್ರಕಟ ಇನ್ನು ಈ ಬಗ್ಗೆ ಶಿಕ್ಷಕರಲ್ಲಿ, ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಏನಾದ್ರೂ ಆಕ್ಷೇಪಣೆಗಳು ಇದ್ದಲ್ಲಿ ನವಂಬರ್ 28 ರೊಳಗೆ ಜಂಟಿ ನಿರ್ದೇಶಕರು(ಪರೀಕ್ಷೆ), ಪದವಿ ಪೂರ್ವ ಶಿಕ್ಷಣ ಇಲಾಖೆ, ಸಂಪಿಗೆ ರಸ್ತೆ, 18ನೇ ಅಡ್ಡ ರಸ್ತೆ, ಮಲ್ಲೇಶ್ವರಂ ಬೆಂಗಳೂರು - 560012 ಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಆಕ್ಷೇಪಣೆ ಪರಿಶೀಲಿಸಿದ ಬಳಿಕ ಅಂತಿಮ ವೇಳಾ ಪಟ್ಟಿ ಪ್ರಕಟಿಸಲಾಗುವುದು ಎಂದು ಆಫೀಶಿಯಲ್ ಮೂಲಗಳಿಂದ ತಿಳಿದುಬಂದಿದೆ.
* ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯು ಶುಕ್ರವಾರ ಮಾರ್ಚ್ 1 ,2019 ರಿಂದ ಇತಿಹಾಸ, ಭೌತಶಾಸ್ತ್ರ ಹಾಗೂ ಗಣಿತ ವಿಷಯಗಳಿಂದ ಪ್ರಾರಂಭವಾಗಲಿದೆ. ಪರೀಕ್ಷೆಯು ಬೆಳಗ್ಗೆ 10.15 ರಿಂದ 01.30 ರವರೆಗೆ ನಡೆಯಲಿದೆ.
* ಮಾರ್ಚ್ 18, ಸೋಮವಾರ ಇಂಗ್ಲೀಷ್ ವಿಷಯದೊಂದಿಗೆ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಮುಕ್ತಾಯಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇನ್ನು ಪರೀಕ್ಷೆ ವೇಳಾಪಟ್ಟಿಯನ್ನ ಅಭ್ಯರ್ಥಿಗಳು ಆಫೀಶಿಯಲ್ ಸೈಟ್‌ಗೆ ವಿಸಿಟ್ ಮಾಡಿ ಚೆಕ್ ಮಾಡಿಕೊಳ್ಳಬಹುದಾಗಿದೆ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments