ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರ (GTTC) ಹುದ್ದೆಗಳ ನೇಮಕಾತಿಗಾಗಿ 20/02/2024 ರಂದು ಅಧಿಸೂಚನೆ ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರ (GTTC) ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಲಿಖಿತ (ನಿರ್ಧಿಷ್ಟ ಪತ್ರಿಕೆ) ಪರೀಕ್ಷೆಯನ್ನು KEA ಯು ದಿನಾಂಕ 2024 ಡಿಸೆಂಬರ್-9, 10, 11 & 14 ವರೆಗೆ ರಾಜ್ಯ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ KEA ಇಲಾಖೆಯು ತನ್ನ ಜಾಲತಾಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಸರಿ ಉತ್ತರಗಳನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಸರಿ ಉತ್ತರವನ್ನು ಡೌನ್ ಲೋಡ್ (Download) ಮಾಡಿಕೊಳ್ಳಬಹುದಾಗಿದೆ.
ಪ್ರಕಟಿಸಲಾದ ಸರಿ ಉತ್ತರಗಳಿಗೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 17-12-2024 ರಂದು ಸಂಜೆ 05:00 ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಕೀ-ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿಯೊಂದಿಗೆ ಪ್ರತಿ ಪ್ರಶ್ನೆಗೆ ರೂ.50/-ರಂತೆ ಶುಲ್ಕವನ್ನು (ಐ.ಪಿ.ಓ. ಅಥವಾ ಡಿ.ಡಿ. ಮೂಲಕ) ಪಾವತಿಸತಕ್ಕದ್ದು, ಒಂದು ವೇಳೆ ನಿಗದಿತ ಶುಲ್ಕವನ್ನು ಪಾವತಿ ಮಾಡದಿದ್ದಲ್ಲಿ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಸರಿ ಉತ್ತರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
Comments