ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ (VAO) ಮತ್ತು GTTC ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಆಯೋಜಿಸಲಾಗಿತ್ತು. ಪ್ರಸ್ತುತ ಈ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಕಡ್ಡಾಯ ಕನ್ನಡ ಲಿಖಿತ ಪರೀಕ್ಷೆಯನ್ನು ದಿನಾಂಕ 29 -ಸೆಪ್ಟೆಂಬರ್-2024 ರಂದು ರಾಜ್ಯದ 1,410 ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 5.75 ಲಕ್ಷ ಅಭ್ಯರ್ಥಿಗಳ ಪೈಕಿ 4.53 ಲಕ್ಷ ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಡ್ಡಾಯ ಕನ್ನಡ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ.
ಫಲಿತಾಂಶವನ್ನು ಪರಿಶೀಲಿಸಲು, ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಬಹುದು :
- KEA ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
- 'ತಾತ್ಕಾಲಿಕ ಕಡ್ಡಾಯ ಕನ್ನಡ ಪರೀಕ್ಷೆಯ ಫಲಿತಾಂಶ' ಮೇಲೆ ಕ್ಲಿಕ್ ಮಾಡಿ.
- ತಮ್ಮ ನೋಂದಣಿ ಸಂಖ್ಯೆಯನ್ನು ಮತ್ತು ಇತರ ಅಗತ್ಯ ವಿವರಗಳನ್ನು ನಮೂದಿಸಿ ಫಲಿತಾಂಶವನ್ನು ಪಡೆಯಬಹುದು.
ಒಟ್ಟು ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್ 27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆಗೆ ಅರ್ಹರಾಗುತ್ತಾರೆ. ವಯೋಮಿತಿ ಸಡಿಲಿಕೆಯ ಅನುಕೂಲ ಪಡೆಯುವವರ ಸಲುವಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಅ.26ರಂದು ಕನ್ನಡ ಕಡ್ಡಾಯ ಪರೀಕ್ಷೆ ಇರುತ್ತದೆ. ಅದರ ನಂತರ ಅವರು ಕೂಡ ಅ.27ರಂದು ನಡೆಯುವ ಮುಖ್ಯ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ.
- ಅಧಿಕಾರಿಗಳು ಆಯ್ಕೆಯ ನಂತರ ಮುಂದಿನ ಹಂತಗಳಲ್ಲಿ ಅಧಿಕೃತ ನೋಂದಣಿ ಪ್ರಕ್ರಿಯೆ ಮತ್ತು ಇತರ ಮಾಹಿತಿಗಳನ್ನು ಹಂಚಿಕೊಳ್ಳಲಿದ್ದಾರೆ. ಎಲ್ಲಾ ಅಭ್ಯರ್ಥಿಗಳಿಗೆ ಶುಭಾಶಯಗಳು!
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Comments