Loading..!

ಕರ್ನಾಟಕ ಲೋಕಸೇವಾ ಆಯೋಗ (KPSC) ಯಿಂದ ವಿವಿಧ ಇಲಾಖೆಯ ಪರೀಕ್ಷೆಯ ಅರ್ಹ ಅಭ್ಯರ್ಥಿಗಳ ಪ್ರವೇಶ ಪತ್ರಗಳು ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by: Bhagya R K | Date:Feb. 14, 2025
Image not found

ಕರ್ನಾಟಕ ಲೋಕಸೇವಾ ಆಯೋಗ (KPSC) ಫೆಬ್ರವರಿ 10ರಿಂದ ಜಲಸಂಪನ್ಮೂಲ ಇಲಾಖೆಯ ಸಹಾಯಕ ಇಂಜಿನಿಯರ್, ಭೂಮಾಪನ, ಕಂದಾಯ ವ್ಯವಸ್ಥೆಯ ಮತ್ತು ಭೂದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕ. ಕಾರ್ಖಾನೆಗಳು, ಬಾಯ್ ರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು. ಅಂತರ್ಜಲ ನಿರ್ದೇಶನಾಲಯದ ಭೂವಿಜ್ಞಾನಿಗಳ ಹುದ್ದೆಗಳ ನೇಮಕಾತಿಗಾಗಿ ಪತ್ರಿಕೆ 2 ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದೆ. ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳು ತಮ್ಮ ಪ್ರವೇಶಪತ್ರವನ್ನು ಅಧಿಕೃತ ವೆಬ್‌ಸೈಟ್ http://kpsc.kar.nic.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.  


ಪರೀಕ್ಷೆಯ ವಿವರ :
- ಪರೀಕ್ಷಾ ದಿನಾಂಕ : ಫೆಬ್ರವರಿ 10, 2025  
- ಹುದ್ದೆಗಳ ಸಂಖ್ಯೆ : ವಿವಿಧ ವಿಭಾಗಗಳಲ್ಲಿ ಅಸಂಖ್ಯಾತ ಹುದ್ದೆಗಳು  
- ಪರೀಕ್ಷೆಯ ವಿಧಾನ : 2 ಹಂತದ ಸ್ಪರ್ಧಾತ್ಮಕ ಪರೀಕ್ಷೆ  


- ಅಭ್ಯರ್ಥಿಗಳು ತಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಬಳಸಿಕೊಂಡು ಪ್ರವೇಶಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಪ್ರವೇಶಪತ್ರದ ಜೆರಾಕ್ಸ್ ಪ್ರತಿಯನ್ನು ಪರೀಕ್ಷಾ ದಿನದಂದು ತೆಗೆದುಕೊಂಡು ಹೋಗುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ಭೇಟಿನೀಡಿ. 


ಮುಖ್ಯ ಸೂಚನೆಗಳು :
✅ ಪರೀಕ್ಷಾ ಕೇಂದ್ರಕ್ಕೆ ಕನಿಷ್ಠ 30 ನಿಮಿಷ ಮುಂಚಿತವಾಗಿ ಹಾಜರಾಗುವುದು ಅಗತ್ಯ.
✅ ಪ್ರವೇಶಪತ್ರದೊಂದಿಗೆ ಸರ್ಕಾರದಿಂದ ಮಾನ್ಯತೆ ಪಡೆದ ಗುರುತಿನ ಚೀಟಿ ಕಡ್ಡಾಯ.
✅ ಮೊಬೈಲ್, ಕ್ಯಾಲ್ಕುಲೇಟರ್ ಮತ್ತು ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಲು ನಿಷೇಧ.


ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಸೂಕ್ತ ಅರ್ಹತಾ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದ್ವಿನಿಯೋಗಪಡಿಸಿಕೊಳ್ಳಿ! 

Comments